ಮೈಸೂರು: ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ಮೈಸೂರಿನ ಚೆಕ್ ಪೋಸ್ಟ್‌ವೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕಂತೆ ಕಂತೆ ಹಣ ಪತ್ತೆ ಆಗಿದೆ.
ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿಯ ಚುನಾವಣೆಯಲ್ಲಿ ನಿಲ್ಲಲು ಅಣಿಯಾಗಿರುವ ಮೈಸೂರಿನ ವರುಣ ಕ್ಷೇತ್ರದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ರೂ.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೈಸೂರು ತಿ.ನರಸೀಪುರ ಹೈವೆಯಲ್ಲಿರುವ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ದೊರಕಿದೆ.
ಮೈಸೂರಿನಾದ್ಯಂತ 45 ಸ್ಥಳಗಳಲ್ಲಿ ಚೆಕ್ ಪೋಸ್ಟ್ ತೆರೆದು ದಿನದ 24 ಗಂಟೆಯೂ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.