Thursday, April 16, 2026
Homeಟಾಪ್ ನ್ಯೂಸ್2ND PUC RESULT: ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ : ರಿಸಲ್ಟ್ ನೋಡೋದು ಹೇಗೆ?

2ND PUC RESULT: ನಾಳೆ 2nd ಪಿಯುಸಿ ಫಲಿತಾಂಶ ಪ್ರಕಟ : ರಿಸಲ್ಟ್ ನೋಡೋದು ಹೇಗೆ?

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ (2nd Puc Result) ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದೆ. 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ನಾಳೆ, ಏಪ್ರಿಲ್ 9 ರಂದು ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ತಿಳಿಸಿದ್ದಾರೆ.

ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ನಾಳೆ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಸಂಪೂರ್ಣ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿ ಅಪ್‌ಲೋಡ್ ಮಾಡುವ ಎಲ್ಲಾ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು:

  • ಮೊದಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ.
  • ಮುಖಪುಟದಲ್ಲಿ ಕಾಣುವ “ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ವಿಷಯ ಸಂಯೋಜನೆಯನ್ನು ನಮೂದಿಸಿ.
  • ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ, ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮರುಮೌಲ್ಯಮಾಪನಕ್ಕೆ ಅವಕಾಶ:

ಫಲಿತಾಂಶ ಪ್ರಕಟವಾದ ನಂತರ, ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಇರುವ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಮತ್ತು ಮರುಮೌಲ್ಯಮಾಪನಕ್ಕೆ (Revaluation) ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಇದರ ದಿನಾಂಕಗಳನ್ನು ಫಲಿತಾಂಶದ ನಂತರ ಅಧಿಕೃತವಾಗಿ ಪ್ರಕಟಿಸಲಾಗುವುದು.

ಇದನ್ನೂ ಓದಿ:ಹಿಂದಿಯೇ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಸಬ್ಜೆಕ್ಟ್‌ – ಅಚ್ಚರಿಯ ಮಾಹಿತಿ ಬಹಿರಂಗ!

ಹೆಚ್ಚಿನ ಸುದ್ದಿ

Change Language »
error: Content is protected !!