ನವಲಗುಂದ: ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥರಾಗಿರುವ ಆತಂಕಕಾರಿ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದಲ್ಲಿ ನಡೆದಿದೆ.
36 ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥತೆ ಮತ್ತು ವಾಂತಿಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯಾಹ್ನದ ಬಿಸಿ ಊಟ ಸೇವಿಸಿದ ಮಕ್ಕಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸ್ವಲ್ಪ ಸಮಯದ ನಂತರ ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ ಎಂದು ಶಿಕ್ಷಕರು ತಿಳಿಸಿದರು.
ಮಕ್ಕಳಿಗೆ ಬಡಿಸಿದ ಅನ್ನದಲ್ಲಿ ಹುಳಗಳು ಕಂಡು ಬಂದಿದೆ. ನಂತರದಲ್ಲಿ ಮಕ್ಕಳು ಅಸ್ವಸ್ಥವಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನೆ ಬೆಳಕಿಗೆ ಬಂದ ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳು ನವಲಗುಂದದ ಶಲವಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಥಳೀಯ ಆರೋಗ್ಯಾಧಿಕಾರಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ, ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸಮೀಪದ ತಾಲೂಕು ಆಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು.