Thursday, March 27, 2025
Homeರಾಜ್ಯಬಾಗೇಪಲ್ಲಿ ಚೆಕ್‌ಪೋಸ್ಟ್‌: 5.5 ಕೆ.ಜಿ ಚಿನ್ನ ಜಪ್ತಿ

ಬಾಗೇಪಲ್ಲಿ ಚೆಕ್‌ಪೋಸ್ಟ್‌: 5.5 ಕೆ.ಜಿ ಚಿನ್ನ ಜಪ್ತಿ

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2.66 ಕೋಟಿ ರೂ. ಮೌಲ್ಯದ 5.5 ಕೆ.ಜಿ ಚಿನ್ನವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ಕರ್ನೂಲಿನ ಚಿನ್ನಾಭರಣ ಮಾರಾಟ ಅಂಗಡಿಯಿಂದ ವಿಜಯವಾಡದ ಚಿನ್ನಾಭರಣ ಮಾರಾಟ ಅಂಗಡಿಗೆ ಈ ಚಿನ್ನ ಸಾಗಿಸಲಾಗುತ್ತಿತ್ತು ಎಂದು ಸಾಗಾಣಿಕೆದಾರರು ತಿಳಿಸಿದ್ದಾರೆ. ಆದರೆ, ಗಡಿ ಭಾಗದ ಬಾಗೇಪಲ್ಲಿ ಚೆಕ್‌ ಪೋಸ್ಟ್‌ಗೆ ಏಕೆ ಬಂದರು ಎಂದು ಅಧಿಕಾರಿಗಳು ಅನುಮಾನಿಸಿದ್ದಾರೆ. ನಮ್ಮ ಗಡಿ ಭಾಗದ ಚೆಕ್‌ಪೋಸ್ಟ್‌ಗೆ ಬಂದಿದ್ದರಿಂದ ಚಿನ್ನ ವಶಕ್ಕೆ ಪಡೆದು ದೂರು ದಾಖಲಿಸಲಾಗಿದೆ. ಸದ್ಯಕ್ಕೆ ಚಿನ್ನವನ್ನು ನ್ಯಾಯಾಲಯದ ವಶಕ್ಕೆ ನೀಡಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುಳಬಾಗಿಲಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 3 ಲಕ್ಷ ರೂ. ಮೌಲ್ಯದ 4.9 ಕೆ.ಜಿ ತೂಕದ ಬೆಳ್ಳಿ ಬಿಸ್ಕತ್‌ ಹಾಗೂ 5 ಲಕ್ಷ ರೂ. ನಗದನ್ನು ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!