ನ್ಯೂಯಾರ್ಕ್: ಅಮೆರಿಕಾದ ಕೆಂಟಕಿಯ ಲೂಯಿವೆಲ್ ನಗರದಲ್ಲಿ ಬ್ಯಾಂಕ್ ಒಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಕೋರ ಮತ್ತು ನಾಲ್ವರು ನಾಗರಿಕರು ಸೇರಿ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಪೊಲೀಸರು ಮತ್ತು ಇತರ ಆರು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಲ್ಲಿನ ಓಲ್ಡ್ ನ್ಯಾಷನಲ್ ಬ್ಯಾಂಕ್ ಗೆ ಬಂದೂಕು ಸಹಿತ ಅಪರಿಚಿತನೊಬ್ಬ ನುಗ್ಗಿದ್ದಾನೆ ಎನ್ನುವ ಮಾಹಿತಿ ಲಭಿಸಿತ್ತು. ಕೂಡಲೇ ಸ್ಥಳಕ್ಕೆ ಭಾವಿಸಿದ ಪೊಲೀಸರು ದಾಳಿಕೋರನ ವಿರುದ್ಧ ಗುಂಡು ಹಾರಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ದಾಳಿಕೋರ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ದಾಳಿಕೋರ ಇದೇ ಬ್ಯಾಂಕ್ ನ ಮಾಜಿ ಉದ್ಯೋಗಿ ಎನ್ನಲಾಗಿದೆ.