ತುಮಕೂರು: ಮಣ್ಣು ತುಂಬಿದ ಲಾರಿ ಹರಿದು ಐದು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ವರುಣ್ (5) ಎಂದು ಗುರುತಿಸಲಾಗಿದೆ. ಮನೆ ಮುಂದೆ ಬಾಲಕ ಆಟವಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಾಲಕ ಆಟವಾಡುತ್ತಿದ್ದಾಗ ಅದೇ ದಾರಿಯಲ್ಲಿ ಬಂದ ಮಣ್ಣು ತುಂಬಿದ ಟ್ರ್ಯಾಕ್ಟರ್ ಬಾಲಕನ ಮೇಲೆ ಹರಿದಿದೆ.
ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.