ಕಲಬುರಗಿ : ಕಲುಷಿತ ನೀರು ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಹೂಡ (ಬಿ) ಗ್ರಾಮದಲ್ಲಿ ನಡೆದಿದೆ.
ಮಮತಾ ಹನುಮಂತ ಜೋಗುರ್ (5) ಮೃತ ಮಗು. ಕಲುಷಿತ ನೀರು ಕುಡಿದ ಮಮತಾ ಹಾಗೂ ಗ್ರಾಮದ ಅನೇಕರು ಅಸ್ವಸ್ಥಗೊಂಡಿದ್ದಾರೆ. ವಾಂತಿಭೇದಿಯಿಂದ ಬಳಲುತ್ತಿರುವ ಗ್ರಾಮದ ಹಲವು ಜನರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕರಿಸದೇ ಮಮತಾ ಮೃತಪಟ್ಟಿದ್ದಾಳೆ. ಇನ್ನೂ ಅಸ್ವಸ್ಥಗೊಂಡಿರುವ ಜನರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಿಬಾಯಿ ಅವರನ್ನು ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಸೇಡಂ ತಾಲೂಕು ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ.