Sunday, July 7, 2024
Homeಕ್ರೈಂBengaluru: ರೈಲ್ವೇ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಶಂಕೆ!

Bengaluru: ರೈಲ್ವೇ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಶಂಕೆ!

ಬೆಂಗಳೂರು: ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿಯ ಪಾರ್ಕಿಂಗ್​ ಸ್ಥಳದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿರುವ ಶಂಕೆ ಮೂಡಿದೆ.

ಮೃತ ಬಾಲಕಿ ಕೂಲಿ ಕೆಲಸ ಮಾಡುವ ದಂಪತಿಯ ಮಗಳು ಎಂಬುದು ತಿಳಿದುಬಂದಿದೆ. ಮೃತದೇಹದಲ್ಲಿ ಪರಚಿದ ಗಾಯಗಳು ಹಾಗೂ ರಕ್ತದ ಕಲೆಗಳು ಕಂಡುಬಂದಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಬಳಿಕ ರೈಲ್ವೆ ನಿಲ್ದಾಣದ ಬಳಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬಾಲಕಿಯ ಮೃತದೇಹ ಕಂಡು ಪಾರ್ಕಿಂಗ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಶವವನ್ನು ಎಸೆದವರು ಯಾರು ಎಂಬುದನ್ನು ತಿಳಿಯಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಹೆಚ್ಚಿನ ಸುದ್ದಿ