ಅಮರಾವತಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ 70 ವರ್ಷದ ವೃದ್ಧೆ ಮೇಲೆ 20 ವರ್ಷದ ಯುವಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಈ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿನಡೆದಿದ್ದು, ಆರೋಪಿಯನ್ನು ಗೋಪಿ (20) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಘಟನೆಯಲ್ಲಿ ಆಕೆಯ ಪಕ್ಕೆಲುಬು ಮುರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆರೋಪಿ ನಮ್ಮ ವಶದಲ್ಲಿದ್ದಾನೆ, ಸಂತ್ರಸ್ತೆಯ ಹೇಳಿಕೆಯ ನಂತರ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂದು ನಂದಿಗಾಮ ಡಿಎಸ್ ಪಿ ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.