ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೃದ್ಧೆ ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಭಯಾನಕ ಘಟನೆಯೊಂದು ವರದಿಯಾಗಿದೆ. ಮೂಡುಬಿದಿರೆ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದೆ. ಪ್ರಕರಣ ಸಂಬಂಧಿಸಿ ಪೊಲೀಸರು ಪುರುಷ ಹೋಮ್ ನರ್ಸ್‌ನನ್ನು ಬಂಧಿಸಿದ್ದಾರೆ.
ಬಂಧಿತ ಪುರುಷ ನರ್ಸ್ ನನ್ನು ಗದಗ ಮೂಲದ 19 ವರ್ಷದ ಶಿವಾನಂದ ಎಂದು ಗುರುತಿಸಲಾಗಿದೆ.
ಕೊಡಂಗಲ್ಲು ಬಳಿಯ ಹುಡ್ಕೋ ಕಾಲೋನಿಯಲ್ಲಿರುವ ರೋಗಿಯ ನಿವಾಸದಲ್ಲಿ ಅನಾರೋಗ್ಯದ ವೃದ್ಧೆಯನ್ನು ನೋಡಿಕೊಳ್ಳಲು ಆರೋಪಿಯನ್ನು ನೇಮಿಸಲಾಗಿತ್ತು.
ಆದರೆ ವೃದ್ಧೆ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ಖಿನ್ನತೆಗೆ ಒಳಗಾಗಿದ್ದರು. ಮನೆಯವರಿಗೆ ಸಂಶಯ ಬಂದು ಆರೋಪಿಯ ಕೊಠಡಿಯಲ್ಲಿ ಸಿಸಿಟಿವಿ ಅಳವಡಿಸಿದ್ದರು. ಸಿಟಿಟಿವಿ ಕ್ಯಾಮೆರಾದಲ್ಲಿ ನರ್ಸ್ ವೃದ್ಧೆಯನ್ನು ಅಸ್ವಾಭಾವಿಕ ಲೈಂಗಿಕತೆಗೆ ಬಲವಂತ ಮಾಡಿರುವುದು ಕಂಡು ಬಂದಿದೆ. ತನಗೆ ಸಹಕರಿಸದ ರೋಗಿಗೆ ಆರೋಪಿ ಥಳಿಸುತ್ತಿದ್ದ ಎಂದೂ ವರದಿಯಾಗಿದೆ.