Sunday, July 7, 2024
Homeಚುನಾವಣೆ 2023GRUHA LAKSHMI : ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಕೊಂಡ ಮಹಿಳೆ!

GRUHA LAKSHMI : ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಕೊಂಡ ಮಹಿಳೆ!

ಹಾವೇರಿ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪ್ರತಿ ತಿಂಗಳು ಬಂದ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ಸಿದ್ದರಾಮಯ್ಯ ಅವರ ಫೋಟೋವನ್ನು ವಾಲ್‌ ಪೇಪರ್‌ಗೆ ಹಾಕಿ ಸಂಭ್ರಮ ಹಂಚಿಕೊಂಡಿದ್ದಾರೆ.

ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಸಿಎಂ ತೆರಳಿದ್ದಾಗ ಮಹಿಳೆ ಹೊಸ ಮೊಬೈಲ್‌ನೊಂದಿಗೆ ಬಂದಿದ್ದು, ಮಹಿಳೆಯ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ ಎಂದಿದ್ದಾರೆ.

GRUHALAKSHMI

ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆ ತಂದ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಬರೆದುಕೊಂಡಿದ್ದಾರೆ.

 

ಹೆಚ್ಚಿನ ಸುದ್ದಿ