2023 ರ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ತನ್ನದೇ ಆದ ರೀತಿಯಲ್ಲಿ ಛಾಪು ಮೂಡಿಸಲು ಆಮ್ ಆದ್ಮಿ ಪಕ್ಷ ರೆಡಿಯಾಗಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬಿನಲ್ಲಿ ಸರ್ಕಾರ ರಚಿಸಿರುವ ಎಎಪಿ ಕರ್ನಾಟಕ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ.
ರಾಜ್ಯದ 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಎಪಿ ಸಜ್ಜಾಗಿದ್ದು, ಮೊದಲ ಹಂತದಲ್ಲಿ 80 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ತಯಾರಾಗಿದೆ. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ನಾಳೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.
ಬ್ರಿಜೇಶ್ ಕಾಳಪ್ಪ, ಟೆನಿಸ್ ಕೃಷ್ಣ, ಮುಖ್ಯಮಂತ್ರಿ ಚಂದ್ರು ಮೊದಲಾದವರು ಎಎಪಿ ಮೂಲಕ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ರಾಜ್ಯ ರಾಜಧಾನಿಯಲ್ಲಿ ಸಕ್ರಿಯವಾಗಿರುವ ಎಎಪಿ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದೆ. ಚುನಾವಣಾ ಪ್ರಚಾರಕ್ಕೆ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ ಮಾನ್ ಮೊದಲಾದವರು ಬರುವ ಸಾಧ್ಯತೆ ಇದೆ.