ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರನ್ನು ಭ್ರಷ್ಟಾಚಾರ ಆರೋಪದ ಮೇಲೆ ಬಂಧಿಸಿರುವುದನ್ನು ವಿರೋಧಿಸಿ ಎಎಪಿ ಮನೆ-ಮನೆ ತೆರಳಿ ಸಹಿ ಸಂಗ್ರಹಿಸುವ ಅಭಿಯಾನವನ್ನು ಸೋಮವಾರ ಪ್ರಾರಂಭಿಸಿದೆ.
ಎಎಪಿಯ ದೆಹಲಿ ಸಂಚಾಲಕ ಗೋಪಾಲ್ ರೈ ಅವರ ಸಮ್ಮುಖದಲ್ಲಿ ಲಕ್ಷ್ಮಿನಗರದ ಮೆಟ್ರೋ ನಿಲ್ದಾಣದ ಬಳಿಯಿಂದ ಅಭಿಯಾನ ಆರಂಭಗೊಂಡಿದೆ.
ದೆಹಲಿ ಸರ್ಕಾರದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಉತ್ತಮ ಕೆಲಸವನ್ನು ತಡೆಯಲು ಜೈನ್ ಮತ್ತು ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ ಎಂದು ಎಎಪಿ ಆರೋಪಿಸಿದೆ.
ಈ ಅಭಿಯಾನಗಳ ಮೂಲಕ, ಸಿಸೋಡಿಯಾ ಮತ್ತು ಜೈನ್ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಜನರಿಗೆ ತಿಳಿಸುವ ಗುರಿಯನ್ನು ಎಎಪಿ ಹೊಂದಿದೆ ಎಂದು ಹೇಳಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ರನ್ನು ಕಳೆದ ಮೇ ತಿಂಗಳಲ್ಲಿ ಬಂಧಿಸಲಾಗಿದ್ದು, ಸದ್ಯ ಅವರು ತಿಹಾರ್ ಜೈಲಿನಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ, 2021-22ರ ಅನುಷ್ಠಾನಕ್ಕೆ ಸಂಬಂಧಿಸಿದ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಸಿಸೋಡಿಯಾ ಅವರನ್ನು ಬಂಧಿಸಿದೆ. ಪ್ರಸ್ತುತ ಈ ಇಬ್ಬರು ನಾಯಕರು ದೆಹಲಿ ಕ್ಯಾಬಿನೆಟ್‌ಗೆ ರಾಜಿನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.