Thursday, March 27, 2025
Homeಟಾಪ್ ನ್ಯೂಸ್ಜೂನ್ 9-10ಕ್ಕೆ ಹಸೆಮಣೆ ಏರಲಿದ್ದಾರೆ ಅಭಿಷೇಕ್-ಅವಿವಾ ಬಿದ್ದಪ್ಪ!

ಜೂನ್ 9-10ಕ್ಕೆ ಹಸೆಮಣೆ ಏರಲಿದ್ದಾರೆ ಅಭಿಷೇಕ್-ಅವಿವಾ ಬಿದ್ದಪ್ಪ!

ಜ್ಯೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಅವರ ಹಲವು ವರ್ಷಗಳ ಪ್ರೀತಿಗೆ ಮದುವೆ ಎಂಬ ಮುಹೂರ್ತ ಫಿಕ್ಸ್ ಆಗಿದೆ.

3-4 ವರ್ಷಗಳ ಡೇಟಿಂಗ್ ನಂತರ ಇತ್ತೀಚೆಗೆ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಖ್ಯಾತ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಮಗಳು ಅವಿವಾ ಜೊತೆ ಇದೀಗ ಹಸೆಮಣೆ ಏರಲು ಅಂಬಿ ಪುತ್ರ ಸಜ್ಜಾಗಿದ್ದಾರೆ.

ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಸ್ಯಾಂಡಲ್‌ವುಡ್ ಸ್ಟಾರ್ ವೆಡ್ಡಿಂಗ್‌ಗೆ ಸಾಕ್ಷಿಯಾಗಲಿದೆ. ನಟ ಅಭಿಷೇಕ್-ಅವಿವಾ ವಿವಾಹ ಇದೇ ಜೂನ್ 9 ಮತ್ತು 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜೂನ್ 12ರಂದು ಮಂಡ್ಯದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಕಾರ್ಯಕ್ರಮ ನಡೆಯಲಿದೆ.

ಏಪ್ರಿಲ್ 5ರಂದು ಅಭಿಷೇಕ್ ಮತ್ತು ಸುಮಲತಾ ಅಂಬರೀಷ್ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ಪತ್ರ ನೀಡಿದ್ದರು. ಈ ವಿಷಯವನ್ನು ಅವರು ಸೋಷಿಯಲ್ ಮೀಡಿಯಾ ಮೂಲಕ ಫೋಟೊ ಸಹಿತ ಹಂಚಿಕೊAಡಿದ್ದರು. ಈ ಮೂಲಕ ಗಣ್ಯರನ್ನು ಆಹ್ವಾನಿಸಲು ಆರಂಭಿಸಿದ್ದರು.

ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮದುವೆಗೆ ಕೇಂದ್ರದ ಪ್ರಮುಖ ರಾಜಕಾರಣಿಗಳ ಜೊತೆಗೆ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಇನ್ನೂ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್‌ನಿಂದ ಶತ್ರುಘ್ನ ಸಿನ್ಹಾ ಇನ್ನೂ ಹಲವು ಪ್ರಮುಖ ತಾರೆಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಮದುವೆಗೆ ಆಭರಣ, ವಸ್ತ್ರಗಳ ಖರೀದಿ ಜೋರಾಗಿ ನಡೆದಿದ್ದು, ಸ್ವತಃ ವಸ್ತ್ರ ವಿನ್ಯಾಸಕಿ ಆಗಿರುವ ಅವಿವಾ ಬಿದ್ದಪ್ಪ ಅವರೇ ತಮ್ಮ ಹಾಗೂ ಅಭಿಷೇಕ್ ತೊಡಲಿರುವ ಉಡುಗೆಯನ್ನು ಡಿಸೈನ್ ಮಾಡುತ್ತಿರುವುದು ವಿಶೇಷ.

ಹೆಚ್ಚಿನ ಸುದ್ದಿ

error: Content is protected !!