ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ರಿಗೆ ಸಂಕಷ್ಟ ಎದುರಾಗಿದೆ. ಜಮೀರ್ ಅಹ್ಮದ್ ವಿರುದ್ಧದ ಪ್ರಕರಣದಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.
ಗುರುವಾರ ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಬಪೀಠ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿತು. ಜಮೀರ್ ಮನೆಯ ಮೇಲೆ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ಪಡೆ 80.44 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಅಕ್ರಮ ಎಂದು ಘೋಷಿಸಿತ್ತು. ಆದಾಯಕ್ಕಿಂತಲೂ ಹಲವು ಪಟ್ಟು ಆಸ್ತಿಯನ್ನು ಗಳಿಸಿದ್ದಾರೆಂದು ಎಸಿಬಿ ಆರೋಪಪಟ್ಟಿ ಸಲ್ಲಿಸಿತ್ತು.