Saturday, May 16, 2026
Homeಟಾಪ್ ನ್ಯೂಸ್ACTOR CHETAN: ಡಾ. ರಾಜ್‌ಕುಮಾರ್ ಸಮಾಧಿ ಕುರಿತು ವಿವಾದಾತ್ಮಕ ಪೋಸ್ಟ್: ನಟ ಚೇತನ್ ಅಹಿಂಸಾ ವಿರುದ್ಧ...

ACTOR CHETAN: ಡಾ. ರಾಜ್‌ಕುಮಾರ್ ಸಮಾಧಿ ಕುರಿತು ವಿವಾದಾತ್ಮಕ ಪೋಸ್ಟ್: ನಟ ಚೇತನ್ ಅಹಿಂಸಾ ವಿರುದ್ಧ FIR ದಾಖಲು

ಬೆಂಗಳೂರು: ಕನ್ನಡದ ವರನಟ ಡಾ. ರಾಜ್‌ಕುಮಾರ್ (Dr .Rajkumar) ಅವರ ಸಮಾಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ (Social Media) ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ (Actor Chetan Ahimsa) ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ (Sheshadripuram) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಕಳೆದ ಏಪ್ರಿಲ್ 24 ರಂದು ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, “ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿರುವುದು ಸರಿಯೇ?” ಎಂದು ಪ್ರಶ್ನಿಸಿದ್ದರು. ಅಲ್ಲದೆ, “21ನೇ ಶತಮಾನದಲ್ಲಿ ಭೂಮಿಯೇ ಪ್ರಮುಖ ಹೋರಾಟವಾಗಿದೆ. ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು” ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ರಾಜಣ್ಣ ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂಬಂಧ ಹಿರಿಯ ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಮತ್ತು ಪೋಸ್ಟ್‌ನ ಸಾಕ್ಷ್ಯಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರದಲ್ಲೇ ಚೇತನ್ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾ.ರಾ. ಗೋವಿಂದು ಅವರು, “ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ. ಜೈಲಿಗೆ ಹೋದರೂ ಚಿಂತೆ ಇಲ್ಲ, ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಾ.ರಾಜ್‌ಕುಮಾರ್ ಪುಣ್ಯಭೂಮಿ ವಿವಾದ, ಸಾರಾ ಗೋವಿಂದು ವಿರುದ್ಧ ನಟ ಚೇತನ್ ದೂರು

ಹೆಚ್ಚಿನ ಸುದ್ದಿ

Change Language »
error: Content is protected !!