Thursday, March 27, 2025
Homeಬೆಂಗಳೂರುಮುನಿರತ್ನ ವಿರುದ್ಧ ಚುನಾವಣಾ ಅಖಾಡಕ್ಕಿಳಿಯಲಿರುವ ನಟ ಚೇತನ್ ಚಂದ್ರ

ಮುನಿರತ್ನ ವಿರುದ್ಧ ಚುನಾವಣಾ ಅಖಾಡಕ್ಕಿಳಿಯಲಿರುವ ನಟ ಚೇತನ್ ಚಂದ್ರ

ಬೆಂಗಳೂರು: ಸಿನಿಮಾ ನಟ ಚೇತನ್ ಚಂದ್ರ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸಚಿವ ಮುನಿರತ್ನ ವಿರುದ್ಧ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇರುವುದಾಗಿ ಸುದ್ದಿ ಹೊರಬಿದ್ದಿದೆ. ಶೀಘ್ರದಲ್ಲೇ ಈ ಕುರಿತು ನಟ ಚೇತನ್ ಚಂದ್ರ ಘೋಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇದುವರೆಗೂ ನಟ ಚೇತನ್ ಚಂದ್ರ 15 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಯಾವ ಸಿನಿಮಾಗಳೂ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಪಿಯುಸಿ, ಪ್ರೇಮಿಸಂ, ರಾಜಧಾನಿ, ಕುಂಭರಾಶಿ, ಜಾತ್ರೆ, ಹುಚ್ಚುಡಗ್ರು, ಸಂಯುಕ್ತ 2 , ಪ್ಲಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.
ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚಿತ್ರೀಕರಣಗೊಂಡಿರುವ “ಪ್ರಭುತ್ವ” ಸಿನಿಮಾ ಚುನಾವಣೆಗೂ ಮುನ್ನ ಬಿಡುಗಡೆಯಾಗುವ ಸಾಧ್ಯತೆಗಳಿವೆ. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯಿಂದ ಮುನಿರತ್ನ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಕಾಂಗ್ರೆಸ್ ಈಗಾಗಲೇ ಕುಸುಮಾ ಹನುಮಂತರಾಯಪ್ಪ ಅವರ ಹೆಸರನ್ನು ಅಂತಿಮಗೊಳಿಸಿದೆ.

ಹೆಚ್ಚಿನ ಸುದ್ದಿ

error: Content is protected !!