ಬೆಂಗಳೂರು: ಬಿಜೆಪಿ ಸೇರುವುದಿಲ್ಲ ಆದರೆ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಮಾತ್ರ ಬೆಂಬಲಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಚಿತ್ರನಟ ಸುದೀಪ್ ಏ. 14 ರಿಂದ ಬಿಜೆಪಿ ಪ್ರಚಾರ ಕೈಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾಂವಿ ಕ್ಷೇತ್ರ ಸೇರಿದಂತೆ ಹಲವೆಡೆ ಬಿಜೆಪಿ ಪರ ಕಿಚ್ಚ ಬ್ಯಾಟು ಬೀಸಲಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಿಲುವು ಬಹಿರಂಗಪಡಿಸಿದ್ದ ಸುದೀಪ್, ತಮಗೆ ಕಷ್ಟಕಾಲದಲ್ಲಿ ನೆರವಾಗಿರುವ ಮಾಮ(ಬಸವರಾಜ ಬೊಮ್ಮಾಯಿ) ನನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದರು. ಸುದೀಪ್ ನಿರ್ಣಯಕ್ಕೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಇದೇ ವೇಳೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಇಬ್ಬರೂ ಸುದೀಪ್ ನಡೆಯನ್ನು ಟೀಕಿಸಿದ್ದರು. ಶುಕ್ರವಾರ ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿರುವ ಸಿಎಂ ಬೊಮ್ಮಾಯಿ ನೀವು ರೆಬೆಲ್ ಸ್ಟಾರ್ ಅಂಬರೀಶ್‍ರನ್ನು ಕರೆಸಿ ಪ್ರಚಾರ ಮಾಡಿರಲಿಲ್ಲವೇ ಎಂದು ಟೀಕಿಸಿದ್ದಾರೆ.