Sunday, July 7, 2024
Homeಚುನಾವಣೆ 2023ACTOR RAMYA: ಕಾಂಗ್ರೆಸ್‌ಗೆ ಸ್ವೀಟೆಸ್ಟ್ ವಿಕ್ಟರಿ ಎಂದ ನಟಿ ರಮ್ಯಾ

ACTOR RAMYA: ಕಾಂಗ್ರೆಸ್‌ಗೆ ಸ್ವೀಟೆಸ್ಟ್ ವಿಕ್ಟರಿ ಎಂದ ನಟಿ ರಮ್ಯಾ

ಬೆಂಗಳೂರು: ಪಂಚರಾಜ್ಯ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ (4 State Election Results) ಹೊರಬಿದ್ದಿದ್ದು, ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ (Congress) ಜಯ ಸಾಧಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಗೆ ಸ್ವೀಟೆಸ್ಟ್ ವಿಕ್ಟರಿ ಎಂದಿದ್ದಾರೆ ಮೋಹಕ ತಾರೆ ರಮ್ಯಾ.

ಕಾಂಗ್ರೆಸ್ ಮಾಜಿ ಸಂಸದೆ ಹಾಗೂ ಸ್ಯಾಂಡಲ್ ವುಡ್‌ ನಟಿ ಮೋಹಕ ತಾರೆ ರಮ್ಯಾ (Actor Ramya), ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ್ದು, ಟ್ವಿಟ್ಟರ್ ನಲ್ಲಿ ರೇವಂತ್ ರೆಡ್ಡಿ ಫೋಟೋ ಹಂಚಿಕೊಂಡಿದ್ದು, ಕಾಂಗ್ರೆಸ್‌ಗೆ ಸ್ವೀಟೆಸ್ಟ್ ವಿಕ್ಷರಿ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ ಅನ್ನು ರೇವಂತಿ ರೆಡ್ಡಿ (Revanth Reddy) ಹಾಗೂ ರಾಷ್ಟ್ರೀಯ ಕಾಂಗ್ರೆಸ್‌ಗೆ ಟ್ಯಾಗ್‌ ಮಾಡಿದ್ದಾರೆ.

ಸದ್ಯ ಪಕ್ಷದ ಗೆಲುವಿಗೆ ಕಾರಣರಾಗಿರುವ ರೇವಂತ್ ರೆಡ್ಡಿ ಅವರು ಸಿಎಂ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ರೇವಂತ್ ರೆಡ್ಡಿ ಹೈದರಾಬಾದ್‌ ನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ‘ಸಿಎಂ.. ಸಿಎಂ’ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಹೆಚ್ಚಿನ ಸುದ್ದಿ