Wednesday, December 4, 2024
Homeಟಾಪ್ ನ್ಯೂಸ್AICC : ಪಕ್ಷ ಬಲವರ್ಧನೆಗೆ ಕಠಿಣ ನಿರ್ಧಾರಗಳ ಅಗತ್ಯವಿದೆ- ಮಲ್ಲಿಕಾರ್ಜುನ ಖರ್ಗೆ

AICC : ಪಕ್ಷ ಬಲವರ್ಧನೆಗೆ ಕಠಿಣ ನಿರ್ಧಾರಗಳ ಅಗತ್ಯವಿದೆ- ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣಾ ಸೋಲಿನ ಬಗ್ಗೆ ಪರಾಮರ್ಶಿಸಲು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರು ಸಭೆ ನಡೆಯಿತು.

ಎಐಸಿಸಿ ಪ್ರಧಾನ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲಪಡಿಸಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಖರ್ಗೆ ಪ್ರತಿಪಾದಿಸಿದರು. ಇನ್ನು ನಾಯಕರು ಪರಸ್ಪರರ ವಿರುದ್ಧ ಸಾರ್ವಜನಿಕವಾಗಿ ಮಾತನಾಡಬಾರದು ಎಂದು ಖರ್ಗೆ ಅವರು ಎಚ್ಚರಿಕೆ ನೀಡಿದರು.

ಪಕ್ಷದಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಖರ್ಗೆ ಆಕ್ರೋಶ ಹೊರಹಾಕಿದ್ದು, ಒಗ್ಗಟ್ಟಿನ ಕೊರತೆ ಮತ್ತು ಸ್ವಪಕ್ಷದ ನಾಯಕರ ವಿರುದ್ಧವೇ ಹೇಳಿಕೆಗಳು ಪಕ್ಷಕ್ಕೆ ಬಹಳಷ್ಟು ಹಾನಿಯನ್ನುಂಟುಮಾಡುತ್ತವೆ. ಹೀಗೆ ಆಗಬಾರದು. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸದಿದ್ದರೆ ಮತ್ತು ಪರಸ್ಪರರ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸದ ಹೊರತು, ನಮ್ಮ ವಿರೋಧಿಗಳನ್ನು ರಾಜಕೀಯವಾಗಿ ಸೋಲಿಸಲು ಆಗದು ಎಂದು ಖರ್ಗೆ ಅವರು ಕಾಂಗ್ರೆಸ್ ನಾಯಕರ ಕಿವಿ ಹಿಂಡಿದರು.

ಇವಿಎಂಗಳು ಚುನಾವಣಾ ಪ್ರಕ್ರಿಯೆಯನ್ನು ಶಂಕಾಸ್ಪದವಾಗಿಸಿವೆ ಎಂದೂ ಉಲ್ಲೇಖಿಸಿದರು. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯನ್ನು ಖಚಿತಪಡಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ಒತ್ತಿ ಹೇಳಿದರು.

ಹೆಚ್ಚಿನ ಸುದ್ದಿ

error: Content is protected !!