Sunday, July 7, 2024
Homeಕ್ರೈಂPETROL CHEATING : ಪೆಟ್ರೋಲ್ ಬಂಕ್ ನಲ್ಲಿ ಮೋಸ : ಸಿಡಿದೆದ್ದ ಗ್ರಾಹಕರು

PETROL CHEATING : ಪೆಟ್ರೋಲ್ ಬಂಕ್ ನಲ್ಲಿ ಮೋಸ : ಸಿಡಿದೆದ್ದ ಗ್ರಾಹಕರು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ಒಂದರಲ್ಲಿ ನಿಗದಿತ ಲೀಟರ್ ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ 510 ಗೆ ಕೇವಲ ಒಂದು ಲೀಟರ್ ಪೆಟ್ರೋಲ್ ನೀಡಿ ವಂಚನೆ ಮಾಡಲಾಗುತ್ತಿದೆ ಎಂದು ಗ್ರಾಹಕರು ದೂರಿದ್ದಾರೆ.

ಇನ್ನು ಈ ಬಗ್ಗೆ ಪೆಟ್ರೋಲ್ ಬಂಕ್ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದು ಪೆಟ್ರೋಲ್ ಹಾಕುವ ಆಪರೇಟರ ಈ ರೀತಿ ಮೋಸ ಮಾಡಿದ್ದಾನೆ ಹೀಗಾಗಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ

ಹೆಚ್ಚಿನ ಸುದ್ದಿ