Saturday, November 2, 2024
Homeಟಾಪ್ ನ್ಯೂಸ್ಹಿಂದಿ ಹೇರಿಕೆ ಆಯ್ತು., ಈಗ ಅಮೂಲ್ ತುರುಕುತ್ತಿದ್ದಾರೆ: ಅಮಿತ್‌ ಶಾ, ಬಿಜೆಪಿ ವಿರುದ್ಧ ಸಿದ್ದು ಗರಂ!

ಹಿಂದಿ ಹೇರಿಕೆ ಆಯ್ತು., ಈಗ ಅಮೂಲ್ ತುರುಕುತ್ತಿದ್ದಾರೆ: ಅಮಿತ್‌ ಶಾ, ಬಿಜೆಪಿ ವಿರುದ್ಧ ಸಿದ್ದು ಗರಂ!

ರಾಜ್ಯ ಮಾರುಕಟ್ಟೆಯಲ್ಲಿ ಅಮೂಲ್‌ ವಿಸ್ತರಣೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂಚು ಹೂಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಅಮಿತ್ ಶಾ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ.   ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!