Saturday, March 15, 2025
Homeಟಾಪ್ ನ್ಯೂಸ್Job Alert: ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗಳ ನೇಮಕಾತಿ; 10th ಪಾಸಾದವರು ಅಪ್ಲೈ ಮಾಡಿ

Job Alert: ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗಳ ನೇಮಕಾತಿ; 10th ಪಾಸಾದವರು ಅಪ್ಲೈ ಮಾಡಿ

ಬೆಂಗಳೂರು: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಒಟ್ಟು 857 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಾಸನದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಎಷ್ಟು ಹುದ್ದೆಗಳಿವೆ..?

ಅಂಗನಾಡಿ ಕಾರ್ಯಕರ್ತರು – 153

ಅಂಗನಾಡಿ ಸಹಾಯಕರು – 519

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.

ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಹಾಸನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್​ಲೈನ್​ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಮಾರ್ಚ್​ 12ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಏಪ್ರಿಲ್​ 9 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು karnemakaone.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಸುದ್ದಿ

error: Content is protected !!