ಮಾನನಷ್ಟ ಮೊಕದ್ದಮೆಯಲ್ಲಿ ನಾನು ಕ್ಷಮೆ ಕೇಳಲು ಸಾವರ್ಕರ್ ಅಲ್ಲ ಗಾಂಧಿ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಹಲವೆಡೆಯಿಂದ ಪ್ರತಿಕ್ರಿಯೆ ಬರಲಾರಂಭಿಸಿದೆ. ಈ ಸಾಲಿಗೆ ಸಂಸದ ಅನುರಾಗ್ ಠಾಕೂರ್ ಕೂಡ ಸೇರ್ಪಡೆಯಾಗಿದ್ದು, ರಾಹುಲ್ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅನುರಾಗ್ ಠಾಕೂರ್, ಸಾವರ್ಕರ್ ಬಗ್ಗೆ ತಿಳಿಯಬೇಕಿದ್ದರೆ ನಿಮ್ಮ ಅಜ್ಜಿ ಇಂದಿರಾಗಾಂಧಿ ಸಾವರ್ಕರ್ ಅವರಿಗೆ ಬರೆದಿರುವ ಪತ್ರವನ್ನು ಓದಿ ಎಂದು ರಾಹುಲ್ ಗಾಂಧಿಯವರನ್ನು ಟೀಕಿಸಿದ್ದಾರೆ. ಜೊತೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ವಿ.ಡಿ.ಸಾವರ್ಕರ್ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿರುವುದನ್ನೂ ಸಹ ಫೋಟೋ ಸಹಿತ ಹಂಚಿಕೊಂಡಿದ್ದಾರೆ. ಭಾರತೀಯರನ್ನು ಬಂಧಮುಕ್ತಗೊಳಿಸಲು ವಿದೇಶಿ ನೆಲದಲ್ಲಿ ಸಾವರ್ಕರ್ ಹೋರಾಡಿದ್ದರೆ, ನೀವು ಮೋಜು ಮಸ್ತಿಗಾಗಿ ವರ್ಷದಲ್ಲಿ ಆರು ತಿಂಗಳು ವಿದೇಶಕ್ಕೆ ಹೋಗಿ ದೇಶದ ವಿರುದ್ಧ ಹೋರಾಡಲು ವಿದೇಶಿಯರ ನೆರವು ಪಡೆಯುತ್ತೀರಿ ಎಂದು ಅನುರಾಗ್ ಠಾಕೂರ್ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.