Tuesday, November 5, 2024
Homeಟಾಪ್ ನ್ಯೂಸ್ಏಪ್ರಿಲ್ 4ರಂದು ಸಿಇಸಿ ಸಭೆ, ಕಾಂಗ್ರೆಸ್ 2ನೇ ಪಟ್ಟಿ ಘೋಷಣೆ ಸಾಧ್ಯತೆ

ಏಪ್ರಿಲ್ 4ರಂದು ಸಿಇಸಿ ಸಭೆ, ಕಾಂಗ್ರೆಸ್ 2ನೇ ಪಟ್ಟಿ ಘೋಷಣೆ ಸಾಧ್ಯತೆ

ಬೆಂಗಳೂರು: ಸಿಇಸಿ ಸಭೆ ಏಪ್ರಿಲ್ 4ರಂದು ನಡೆಯಲಿದ್ದು, ನಾವು ದೆಹಲಿಗೆ ತೆರಳುತ್ತೇವೆ. 2ನೇ ಪಟ್ಟಿಯನ್ನು ನಾನು ಪ್ರಕಟಿಸುವುದಿಲ್ಲ. ಸಭೆಯಲ್ಲಿ ಚರ್ಚೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಏಪ್ರಿಲ್ 4ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ದೆಹಲಿಯಲ್ಲಿ ಸಿಇಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಬಗ್ಗೆ ಮಹತ್ವದ ಚರ್ಚೆ ಆಗಲಿದೆ.

ಕೆಲವು ಕಡೆ ಗೊಂದಲ, ಸಾಮೂಹಿಕ ರಾಜೀನಾಮೆ ಕೊಡುವ ಬಗ್ಗೆ ಕೇಳಿದಾಗ, ‘ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಯಾವುದೇ ಗೊಂದಲ ಇಲ್ಲ. ಬೇರೆ ಪಕ್ಷಗಳಲ್ಲಿ ಬೆದರಿಕೆ ತಂತ್ರ ನಡೆಯಬಹುದು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುವುದಿಲ್ಲ. ಬಿಜೆಪಿಯಲ್ಲಿ ಬೆದರಿಕೆ ಇಲ್ಲವೇ? ಅವರು ಪಟ್ಟಿ ಪ್ರಕಟಿಸದಿರುವುದೇಕೆ? ದಿನಾಂಕ ಮುಂದೂಡುತ್ತಿರುವುದೇಕೆ? ಅವರ ಪಕ್ಷದಲ್ಲಿ ಆಂತರಿಕ ಸಮಸ್ಯೆ ಇದೆ. ಜೆಡಿಎಸ್ ನಲ್ಲೂ ಆಂತರಿಕ ಸಮಸ್ಯೆ ಇದೇ ಕಾರಣಕ್ಕೆ ಅನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯನ್ನು ಜನ ತಿರಸ್ಕರಿಸಲಿದ್ದಾರೆ’ ಎಂದು ತಿಳಿಸಿದರು.

ನನ್ನ ರಾಜಕೀಯ ಜೀವನ ವರುಣದಲ್ಲಿ ಪ್ರಾರಂಭವಾಗಿತ್ತು. ಇದು ನನ್ನ ಕೊನೆಯ ಚುನಾವಣೆ ಆದ ಕಾರಣ ಅಲ್ಲಿ ಕಣಕ್ಕಿಳಿಯುತ್ತಿದ್ದೇನೆ. ಏಪ್ರಿಲ್ 4ರಂದು ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!