ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕಾರಣ ಮಾಡಿದ ಚೀನಾದ ನಡೆಗೆ ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಈ ಕ್ರಮವನ್ನು ʼಸಾರಾಸಗಟಾಗಿ ತಿರಸ್ಕರಿಸುತ್ತದೆʼ ಎಂದು ಹೇಳಿದೆ.
ಅರುಣಾಚಲ ಪ್ರದೇಶವು ʼಭಾರತದ ಅವಿಭಾಜ್ಯ ಮತ್ತು ಎಂದಿಗೂ ಬೇರ್ಪಡಿಸಲಾಗದ ಭಾಗವಾಗಿದೆʼ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಂಗಳವಾರ ಹೇಳಿದ್ದಾರೆ.
ಅರುಣಾಚಲ ಪ್ರದೇಶದ ಗಡಿ ಭಾಗದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದ ಹಿನ್ನೆಲೆಯಲಿ ಬಾಗ್ಚಿ ಪ್ರತಿಕ್ರಿಯೆ ನೀಡಿದ್ದಾರೆ.
ಅರುಣಾಚಲ ಪ್ರದೇಶವನ್ನು ʼದಕ್ಷಿಣ ಟಿಬೆಟ್ʼ ಎಂದು ಕರೆದುಕೊಳ್ಳುವ ಚೀನಾ ಅರುಣಾಚಲದ ಮೇಲೆ ಹಕ್ಕು ಸಾಧಿಸುವುದನ್ನು ಮುಂದುವರೆಸಲು ಪ್ರಯತ್ನಿಸುತ್ತಿದೆ.
“ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ, ಬೇರ್ಪಡಿಸಲಾಗದ ಭಾಗವಾಗಿದೆ. ಹೆಸರುಗಳನ್ನು ಬದಲಾಯಿಸುವುದರಿಂದ ಈ ವಾಸ್ತವತೆ ಬದಲಾಗುವುದಿಲ್ಲ” ಎಂದು ಬಾಗ್ಚಿ ಹೇಳಿದರು.