ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟೊಯಾಗಿದ್ದಾರೆ. ಬಿಜೆಪಿ ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿತವಾಗಿದ್ದ ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಬೆಲ್ಲದ್ ಡಿಕೆಶಿಯನ್ನು ಭೇಟಿ ಆಗಿರುವುದು ಸಹಜವಾಗಿಯೇ ಕುತೂಹಲ ಕೆರಳಿಸಿದೆ.
ಮೂಲಗಳ ಪ್ರಕಾರ, ಹುಬ್ಬಳ್ಳಿ-ಧಾರವಾಡದ ರಾಜಕೀಯ ಸ್ಥಿತಿಗತಿಗಳನ್ನು ಚರ್ಚಿಸಲು ಡಿಕೆಶಿ ಬಳಿ ಬಂದಿದ್ದು, ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರು ಕಾಂಗ್ರೆಸ್ ಸೇರಿರುವುದು ಬೆಲ್ಲದ್ ಅವರಲ್ಲಿ ಆತಂಕ ಸೃಷ್ಟಿಸಿದೆ ಎನ್ನಲಾಗಿದೆ.
ಮೋಹನ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬೆಲ್ಲದ್ ಗೆಲುವಿನ ಹಾದಿ ಕಠಿಣವಾಗಬಹುದು ಎನ್ನಲಾಗಿದೆ. ಹಾಗಾಗಿ, ಬೆಲ್ಲದ್ ವಿರುದ್ಧ ಲಿಂಬಿಕಾಯಿ ಬದಲು ಬೇರೆ ಅಭ್ಯರ್ಥಿಗಳನ್ನು ಹಾಕುವಂತೆ ಮನವಿ ಮಾಡಲು ಡಿಕೆಶಿ ಬಳಿ ಬೆಲ್ಲದ್ ಹೋಗಿದ್ದಾರೆ ಎನ್ನಲಾಗಿದೆ. ಆದರೆ, ಡಿಕೆಶಿ ಬೆಲ್ಲದ್ ಮನವಿಗೆ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕಾದು ನೋಡಬೇಕಿದೆ.