Wednesday, February 19, 2025
Homeಟಾಪ್ ನ್ಯೂಸ್ರಾಜ್ಯ ಚುನಾವಣೆಗೆ ಓವೈಸಿ ಪಕ್ಷ ಎಂಟ್ರಿ: ಜೆಡಿಎಸ್‌ ಜೊತೆ ಮೈತ್ರಿ ಮಾತುಕತೆ

ರಾಜ್ಯ ಚುನಾವಣೆಗೆ ಓವೈಸಿ ಪಕ್ಷ ಎಂಟ್ರಿ: ಜೆಡಿಎಸ್‌ ಜೊತೆ ಮೈತ್ರಿ ಮಾತುಕತೆ

ಬೆಂಗಳೂರು: ಕರ್ನಾಟಕ ಚುನಾವಣಾ ಕಣ ರಂಗೇರಿದೆ. ಈ ಬಾರಿ ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ ಅವರ ಎಐಎಂಐಎಂ ಪಕ್ಷವೂ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.

ಪಕ್ಷದ ಮೂಲಗಳ ಪ್ರಕಾರ, ಎಲ್ಲವೂ ಅಂದುಕೊಂಡಂತೆ ನಡೆದರೆ ಜೆಡಿಎಸ್‌ ಜೊತೆ ಮೈತ್ರಿಯಾಗಿ 25 ಕ್ಷೇತ್ರಗಳಲ್ಲಿ ಎಐಎಂಐಎಂ ಸ್ಪರ್ಧಿಸಲಿದೆ.

“ನಾವು ಮೂವರು ಅಭ್ಯರ್ಥಿಗಳನ್ನು ಘೋಷಿಸಿದ್ದೇವೆ. ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಂಡಿತ, ನಾವು ಮೈತ್ರಿ ಮಾಡಿಕೊತ್ತೇವೆಯೋ ಇಲ್ಲವೋ ಎನ್ನುವುದು ಇನ್ನೂ ತೀರ್ಮಾನವಾಗಬೇಕಿದೆ. ಮೈತ್ರಿ ಮಾಡಿಕೊಳ್ಳಲಂತೂ ತಯಾರಾಗಿದ್ದೇವೆ” ಎಂದು ಓವೈಸಿ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ಹೇಳಿದ್ದಾರೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ಮಾತುಕತೆ ನಡೆಸುತ್ತಿದೆ. ಆದರೆ ಈ ಪ್ರಸ್ತಾಪಕ್ಕೆ ಜೆಡಿಎಸ್ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಎಐಎಂಐಎಂ ಪಕ್ಷದ ರಾಜ್ಯ ಅಧ್ಯಕ್ಷ ಒಸ್ಮಾನ್ ಘನಿ ಹೇಳಿದ್ದಾರೆ. ಕಾಂಗ್ರೆಸ್ ನಮ್ಮ ಜೊತೆ ಮೈತ್ರಿ ಮಾಡಿಕೊಳ್ಳಲು ಬಯಸುವುದಿಲ್ಲ ಏಕೆಂದರೆ ಅವರು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಓವೈಸಿ ಹೇಳಿದರು.

ಮುಸ್ಲಿಮರ ಮೀಸಲಾತಿಯನ್ನು ರದ್ದು ಪಡಿಸಿರುವ ಕ್ರಮವನ್ನು ಬಲವಾಗಿ ಖಂಡಿಸಿರುವ ಓವೈಸಿ, ಈ ಕ್ರಮ ಸಂವಿಧಾನ ಬಾಹಿರ, ಆದರೆ, ಜಾತ್ಯಾತೀತ ಸೋಗಿನ ಪಕ್ಷಗಳು ಇದರ ವಿರುದ್ಧ ಬಲವಾದ ಪ್ರತಿಭಟನೆಗಳನ್ನೇ ನಡೆಸಲಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!