ಮುನಿರತ್ನ ಅವರು ನಿರ್ಮಿಸಲು ಹೊರಟಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಸಿನೆಮಾದ ಬಗ್ಗೆ ಒಕ್ಕಲಿಗ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಅಶ್ವತ್ಥನಾರಾಯಣ ಅವರು ಸಿನೆಮಾದಲ್ಲಿ ತನ್ನ ಪಾತ್ರವೇನೂ ಇಲ್ಲ ಎಂದ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.
ನಿರ್ಮಾಪಕರೂ ಆಗಿರುವ ಮುನಿರತ್ನ ಅವರನ್ನು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮಿ ಅವರು ಮಾತುಕತೆಗ ಕರೆದ ಬೆನ್ನಲ್ಲೇ ಈ ಸ್ಪಷ್ಟೀಕರಣ ಹೊರಬಿದ್ದಿದೆ.