ಗುವಾಹಟಿ: ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರುವುದು ಮತ್ತು ಸೇವಿಸುವುದನ್ನು ಅಸ್ಸಾಂನ ಬಿಜೆಪಿ ಸರ್ಕಾರ ನಿಷೇಧಿಸಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ಹೊಸ ನಿಬಂಧನೆಗಳನ್ನು ಅಳವಡಿಸಲು ತಿದ್ದುಪಡಿ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಘೋಷಿಸಿದ್ದಾರೆ.
आज असम मंत्रिमंडल ने राज्य के होटलों, रेस्टोरेंट्स और सार्वजनिक स्थानों पर गोमांस पर प्रतिबंध लगाने का निर्णय लिया है।#AssamBeefBan pic.twitter.com/Nhda2uQ3Gt
— Himanta Biswa Sarma (@himantabiswa) December 4, 2024
ಇದು ಗೋಮಾಂಸ ಸೇವನೆಯ ವಿರುದ್ಧ ಬಿಜೆಪಿಯ ನಿಲುವಿಗೆ ಅನುಗುಣವಾಗಿದೆ. ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ ಎಂದು ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಕ್ರಮವನ್ನು ಸಮರ್ಥಿಸಿಕೊಂಡ ಶರ್ಮಾ, ಅಸ್ಸಾಂನಲ್ಲಿ ಗೋಹತ್ಯೆಗಳನ್ನು ನಿಷೇಧಿಸಲು ನಾವು ಮೂರು ವರ್ಷಗಳ ಹಿಂದೆ ಕಾನೂನು ತಂದಿದ್ದೇವೆ. ಅದನ್ನು ಸಾಧಿಸುವಲ್ಲಿ ನಾವು ದೊಡ್ಡ ಯಶಸ್ಸನ್ನು ಸಾಧಿಸಿದ್ದೇವೆ. ಈಗ ನಾವು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳಲ್ಲಿ ಗೋಮಾಂಸ ನೀಡುವುದನ್ನು ನಿಷೇಧಿಸಲು ನಿರ್ಧರಿಸಿದ್ದೇವೆ. ಅಸ್ಸಾಂನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳು, ಯಾವುದೇ ದೇವಾಲಯದ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಕಾನೂನು ಈಗ ರಾಜ್ಯಾದ್ಯಂತ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.