ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ.
ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಕಾಂಗ್ರೆಸ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಚುನಾವಣಾ ಸಮಿತಿಯು ಹಲವು ಸುತ್ತಿನ ಚರ್ಚೆಗಳನ್ನು ನಡೆಸಿತ್ತು.
ಸಂಸದ ಮೋಹನ್ ಪ್ರಕಾಶ್ ನೇತೃತ್ವದ ಪಕ್ಷದ ಸ್ಕ್ರೀನಿಂಗ್ ಸಮಿತಿಯು ಸರಣಿ ಸಭೆ ನಡೆಸಿ 99 ಕ್ಷೇತ್ರಗಳಿಗೆ ಸಂಭಾವ್ಯರ ಹೆಸರನ್ನು ಅಂತಿಮಗೊಳಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.