ಬೆಂಗಳೂರು : ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ರು
ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ರಾಜೀನಾಮೆ ಸಲ್ಲಿಸಲಿದ ರಾಮಸ್ವಾಮಿ ಜೆಡಿಎಸ್ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರು. ನಾನು ಜೆಡಿಎಸ್ ಪಕ್ಷ ಬಿಟ್ಟಿಲ್ಲ, ಅವರೇ ಹೊರಗೆ ಹಾಕಿದ್ರು. ಈ ಹಿಂದೆ ಕರ್ನಾಟಕ ರಾಜಕಾರಣ ಬಹಳ ಚೆನ್ನಾಗಿತ್ತು , ಈಗ ಬಹಳ ಹದಗೆಟ್ಟಿದೆ. ಒಲೈಕೆ ರಾಜಕಾರಣ ನಡೆಯುತ್ತಿದೆ. ನಿಮಗೆ ಎಲ್ಲ ಗೊತ್ತಲ್ಲ. ನಾನು ವಿಕ್ಟಿಮ್, ನಾನು ಹಣದ ಶಕ್ತಿಯ ಮುಂದೆ ಬಲಿಪಾಶು ಆದೆ.ಭ್ರಷ್ಟಾಚಾರವನ್ನ ಎತ್ತಿ ತೋರಿಸಿದಕ್ಕೆ ನನ್ನನ್ನ ವಿಕ್ಟಿಮ್ ಮಾಡಿದ್ರು ಎಂದು ಬೇಸರ ವ್ಯಕ್ತಪಡಿಸಿದ್ರು
ಜೆಡಿಎಸ್‌ನವರು ನನಗೆ ಶಾಸಕನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ನಾನೆಂದೂ ವೈಯಕ್ತಿಕ ಲಾಭಕ್ಕಾಗಿ ಆಡಳಿತ ಮಾಡಿರಲಿಲ್ಲ. ವಿಧಾನಸಭೆ ಒಳಗೆ ಮತ್ತು ಹೊರಗೆ ನೇರವಾಗಿ ಮಾತನಾಡಿದ್ದೇನೆ. ನನಗೆ ಜನಸೇವೆಗಾಗಿ ಅವಕಾಶ ಸಿಕ್ಕಿತ್ತು. ಮುಂದೆ ಅವಕಾಶ ಸಿಕ್ಕಿದ್ರು ಅದನ್ನ ಜನಸೇವೆಗೆ ಮೀಸಲಿಡುತ್ತೇನೆ ಎಂದ್ರು