ಚಿಕ್ಕಮಗಳೂರಿನಲ್ಲಿ ಹಾಡಹಗಲೇ ಅಪಹರಣಕಾರನೊಬ್ಬ ಪುಟ್ಟ ಬಾಲಕನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ರಸ್ತೆ ಬದಿಯಲ್ಲಿ ಇತರ ಇಬ್ಬರು ಮಕ್ಕಳೊಂದಿಗೆ ಆಟವಾಡುತ್ತಿದ್ದ ಬಾಲಕನನ್ನು ಬಿರುಸಿನಿಂದ ವ್ಯಕ್ತಿಯೊಬ್ಬ ಎತ್ತಿಕೊಂಡು ಹೋಗಿದ್ದಾನೆ, ತಕ್ಷಣವೇ ಕೊಸರಾಡಿದ ಬಾಲಕ, ಕಿಡ್ನ್ಯಾಪರ್ ಕೈಯಿಂದ ತಪ್ಪಿಸಿಕೊಂಡಿದ್ದಾನೆ.
ಬಾಲಕ ತಪ್ಪಿಸಿಕೊಳ್ಳುತ್ತಿದ್ದಂತೆ ಅಪಹರಣಕಾರ ಅಲ್ಲಿಂದ ಓಡಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಾಡಹಗಲೇ, ಜನಜಂಗುಳಿಯಿಂದ ಮಕ್ಕಳನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಕ್ಕಳನ್ನು ಹೊರಗೆ ಆಟವಾಡಲು ಬಿಡಲು ಹಿಂದೆ ಮುಂದೆ ನೋಡುವಂತಾಗಿದೆ.