ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಗಮ (KSDL) ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಪ್ರಶಾಂತ್‌ಗೆ ಜೈಲೇ ಗತಿಯಾಗಿದೆ. ಮಾಡಾಳು ಪ್ರಶಾಂತ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.
ಇನ್ನು ಪ್ರಶಾಂತ್ ತಂದೆ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿದ್ದು, ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ಪರಪ್ಪನ ಅಗ್ರಹಾರದಲ್ಲೇ ವಾಸ ಮುಂದುವರಿಸಬೇಕಾಗಿದೆ
ಗುತ್ತಿಗೆದಾರನಿಂದ 40 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ ಮಾಡಾಳು ಪ್ರಶಾಂತ್‌ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ರು. ನಂತರ ಮಾಡಾಳು ವಿರೂಪಾಕ್ಷಪ್ಪ ಮನೆ ಮೇಲೂ ದಾಳಿ ನಡೆಸಿ ಸುಮಾರು 8 ಕೋಟಿ ರುಪಾಯಿ ಹಣ ವಶಪಡಿಸಿಕೊಳ್ಳಲಾಗಿತ್ತು. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ರು.