Sunday, May 17, 2026
Homeಟಾಪ್ ನ್ಯೂಸ್BENGALURU: ವಾಯುವಿಹಾರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಬಂದ್‌ ಬಂದ್‌ ಬಂದ್‌!

BENGALURU: ವಾಯುವಿಹಾರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಬಂದ್‌ ಬಂದ್‌ ಬಂದ್‌!

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ (bangalore university)ಗೆ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ನಿರ್ಬಂಧ ಬೀಳಲಿದೆ. ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯದ ಆಡಳಿತ ಕಚೇರಿವರೆಗಿನ ರಸ್ತೆಯಲ್ಲಿ ಸಾರ್ವಜನಿಕರ (Public) ಪ್ರವೇಶ ನಿರ್ಬಂಧಿಸಲು ವಿಶ್ವವಿದ್ಯಾಲಯದ ಇತ್ತೀಚಿನ ಸಿಂಡಿಕೇಟ್‌ (Sindicate) ಮೀಟಿಂಗ್​ನಲ್ಲಿ ತೀರ್ಮಾನಿಸಲಾಗಿದೆ.

ಸಿಂಡಿಕೇಟ್‌ ಸಭೆಯ ನಿರ್ಣಯವನ್ನು ವಿಶ್ವವಿದ್ಯಾಲಯ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಗಾಗ ಗಂಧದ ಮರ ಕಳ್ಳತನ ಆಗುತ್ತಿವೆ. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಹೆಚ್ಚಾಗಿವೆ. ಅಪಘಾತ ಪ್ರಕರಣಗಳೂ ಏರಿಕೆಯಾಗುತ್ತಿವೆ. ಇದಲ್ಲದೇ ಕ್ಯಾಂಪಸ್‌ ಆವರಣದಲ್ಲಿ ಘನತ್ಯಾಜ್ಯ ತಂದು ಎಸೆದು ಪರಿಸರ ಹಾಳು ಮಾಡುತ್ತಿದ್ದಾರೆ ಎಂಬ ದೂರು ಬಂದಿದ್ದಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.

ಇದನ್ನೂ ಓದಿ : ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ್ ಸಿಂಗ್ ಹೆಸರು! ಸಂಪುಟ ಅಸ್ತು

ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿ ಕ್ಯಾಂಪಸ್‌ಗೆ ಸಂಪೂರ್ಣ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಬೇಕೆಂದು ಆಗ್ರಹಿಸುತ್ತಾ ಬಂದಿದ್ದರು. ಆದರೆ, ವಾಯುವಿಹಾರಕ್ಕೆ ಬರುವವರು, ಕ್ಯಾಂಪಸ್‌ ಒಳಗಿನ ರಸ್ತೆಗಳಲ್ಲಿ ಸಂಚರಿಸುವ ಸುತ್ತಮುತ್ತಲ ನಿವಾಸಿಗಳು ಈ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು. ಹಾಗಾಗಿ ಹಂತ ಹಂತಗಾಗಿ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ.

ಮರಿಯಪ್ಪನಪಾಳ್ಯ ಕಡೆಯ ವಿವಿ ಗೇಟ್‌ ಬಂದ್‌?

ಸದ್ಯ ಮೈಸೂರು ರಸ್ತೆ, ಮಲ್ಲತ್ತಹಳ್ಳಿ, ನಾಗರಭಾವಿ ಮತ್ತು ಮರಿಯಪ್ಪನ ಪಾಳ್ಯ ಭಾಗಗಳಿಂದ ಜ್ಞಾನಭಾರತಿ ಕ್ಯಾಂಪಸ್‌ ಪ್ರವೇಶಿಸಬಹುದು. ಇದೀಗ ಮೈಸೂರು ರಸ್ತೆಯಿಂದ ಮಲ್ಲತ್ತಹಳ್ಳಿ ಮಾರ್ಗವನ್ನು ಸಾರ್ವಜನಿಕರಿಗೆ ನಿರ್ಬಂಧಿಸೋಕೆ ಆಗಲ್ಲ. ಈ ರಸ್ತೆ ಬಿಬಿಎಂಪಿ ನಿರ್ಮಿಸಿದೆ. ಅಲ್ಲದೆ, ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿ ನಿರ್ಬಂಧ ವಿಧಿಸಬೇಕಾಗುತ್ತದೆ.

ನಾಗರಬಾವಿ ಕಡೆಯಿಂದ ವಿವಿ ಪ್ರವೇಶವನ್ನು ನಿರ್ಬಂಧಿಸಬಹುದು. ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ವಿಶ್ವವಿದ್ಯಾಲಯಕ್ಕಿದೆ. ಮರಿಯಪ್ಪನಪಾಳ್ಯ ಕಡೆಯ ಗೇಟನ್ನೂ ಕಾಂಪೌಂಡ್‌ ನಿರ್ಮಾಣ ಮಾಡಿ ಬಂದ್‌ ಮಾಡಬಹುದು.

ವಿ.ವಿ.ಗೆ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಒತ್ತಾಯ:

ಬೆಂಗಳೂರು ನಗರ ವಿಶ್ವವಿದ್ಯಾನಿಲಯಕ್ಕೆ ಬೆಂಗಳೂರನ್ನು ಕಟ್ಟಿಸಿದ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ ಕೆಂಚಪ್ಪಗೌಡರು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೆಂಪೇಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಬೆಂಗಳೂರಿನ ಯಾವುದಾದರೂ ಒಂದು ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರನ್ನು ಇಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದರು.

ಬೆಂಗಳೂರು ವಿಶ್ವವಿದ್ಯಾಲಯವನ್ನು ವಿಭಜಿಸಿ ಮೂರು ವಿಶ್ವವಿದ್ಯಾನಿಲಯಗಳನ್ನಾಗಿ ಸರ್ಕಾರ ಮಾಡಿದೆ. ಈಗಾಗಲೇ ಗಣ್ಯರ ಹೆಸರನ್ನು ವಿಶ್ವವಿದ್ಯಾನಿಲಯಗಳಿಗೆ ನಾಮಕರಣ ಮಾಡಲಾಗಿದೆ. ಬೆಂಗಳೂರಿನ ಯಾವುದಾದರೂ ಒಂದು ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರನ್ನು ಇಡಬೇಕು. ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣ ಎಂಬ ಹೆಸರನ್ನು ಇಡಲಾಗಿದೆ. ನ್ಯಾಷನಲ್ ಕಾಲೇಜಿನ ಜೊತೆಗೆ ಕೆಂಪೇಗೌಡ ಆಸ್ಪತ್ರೆ ಎಂಬುದನ್ನು ಸೇರಿಸಿ ಮೆಟ್ರೋ ನಿಲ್ದಾಣಕ್ಕೆ ಮರು ನಾಮಕರಣ ಮಾಡಬೇಕು. ಆ ಮೂಲಕ ಕೆಂಪೇಗೌಡ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ್ದರು.

ಹೆಚ್ಚಿನ ಸುದ್ದಿ

Change Language »
error: Content is protected !!