Thursday, April 16, 2026
Homeಟಾಪ್ ನ್ಯೂಸ್BOMMAI: ಎಸ್‌ಟಿಗೆ ಕುರುಬ ಸಮುದಾಯ ಸೇರಿಸಲು ಶಿಫಾರಸು ಮಾಡಿದ್ದೇ ಸಿದ್ದರಾಮಯ್ಯ: ಬೊಮ್ಮಾಯಿ

BOMMAI: ಎಸ್‌ಟಿಗೆ ಕುರುಬ ಸಮುದಾಯ ಸೇರಿಸಲು ಶಿಫಾರಸು ಮಾಡಿದ್ದೇ ಸಿದ್ದರಾಮಯ್ಯ: ಬೊಮ್ಮಾಯಿ

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿ (ST) ಸಮುದಾಯಕ್ಕೆ ಸೇರಿಸಲು ಶಿಫಾರಸ್ಸು ಮಾಡಿದ್ದೇ ಸಿಎಂ ಸಿದ್ದರಾಮಯ್ಯ (Siddaramaiah) ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಅವರ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಸಂಬಂಧ ಕೇಂದ್ರಕ್ಕೆ ಪ್ರಸ್ತಾಪ ಹೋಗಿತ್ತು. ಕುಲ ಶಾಸ್ತ್ರೀಯ ಅಧ್ಯಯನ ಮಾಡಿಸುವಂತೆ ವಾಪಸ್‌‍ ಬಂದಿತ್ತು. ಸಮಿಶ್ರ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶ ಮಾಡಿತ್ತು ಎಂದು ಹೇಳಿದರು.

ನಮ್ಮ ಅವಧಿಯಲ್ಲಿ ಕುಲಶಾಸ್ತ್ರಿಯ ಅಧ್ಯಯನ ವರದಿ ಬಂದಿತ್ತು. ಅದನ್ನು ನಮ್ಮ ಸರ್ಕಾರ ಒಪ್ಪಿತ್ತು. ಚುನಾವಣೆ ಬಂದು ನಮ್ಮ ಸರ್ಕಾರ ಹೋಯಿತು. ಈಗಿನ ಕಾಂಗ್ರೆಸ್‌‍ ಸರ್ಕಾರ ಅದನ್ನು ಪರಿಶೀಲನೆ ಮಾಡಿ 2023 ರ ಜುಲೈ 20 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದರು.

ಸರ್ಕಾರ ದಾಖಲೆಗಳನ್ನು ತೆಗೆದು ನೋಡಲಿ. ಈಗ ಸಿದ್ದರಾಮಯ್ಯ ಅವರ ಕೈಯಲ್ಲಿ ಇದೆ ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡಬೇಕು. ವಾಲ್ಮೀಕಿ ಸಮುದಾಯ ಮತ್ತು ಕುರುಬರ ನಡುವೆ ಏನೂ ಸಮಸ್ಯೇ ಆಗುವುದಿಲ್ಲ. ಅಹಿಂದ ನಾಯಕ ಸಿದ್ದರಾಮಯ್ಯ ಅವರೇ ಇದ್ದಾರೆ. ಮೀಸಲಾತಿ ಹೆಚ್ಚಳ ಮಾಡುವುದು ಅಷ್ಟು ಸುಲಭವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ..

ಇದೇ ವೇಳೆ ನವೆಂಬರ್‌ ಕ್ರಾಂತಿ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನವೆಂಬರ್‌ನಲ್ಲಿ ಏನಾಗುತ್ತೊ ಬಿಡುತ್ತದೋ ಅದು ಕಾಂಗ್ರೆಸ್‌‍ ಆಂತರಿಕ ವಿಚಾರ. ಆದರೆ ಆಡಳಿತ ಮಾಡುವುದನ್ನು ಬಿಟ್ಟು ಸಿಎಂ ನಾನು ಮುಂದುವರಿಯುತ್ತೇನೆ ಎನ್ನುವುದು ಕೆಲವರು ಅವರು ಮುಂದುವರಿಯುವುದಿಲ್ಲ ಎನ್ನುವುದು ಸ್ಪಷ್ಟ. ಕಾಂಗ್ರೆಸ್‌‍ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಟು ಗೊಂದಲ ಇದೆ. ಅಶಿಸ್ತು ತೋರಿದರೆ ಕ್ರಮ ಕೈಗೊಳ್ಳುತ್ತೆನೆ ಎಂದರೂ ಶಾಸಕರು ಸುಮನಿಲ್ಲ. ಹೈಕಮಾಂಡ್‌ ನವರಿಗೂ ಇದರ ಸ್ಪಷ್ಟತೆ ಇಲ್ಲಾ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರ ಹಿನ್ನೆಲೆ ಮತ್ತು ಇಮೇಜ್‌ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಡಿಸಿಎಂ ಶಿವಕುಮಾರ್‌ ಪಕ್ಷ ಕಟ್ಟಿದ್ದಾರೆ ಅವರ ಬಗ್ಗೆಯೂ ಯೋಚನೆ ಮಾಡಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ. ಕ್ರಾಂತಿ ನವೆಂಬರ್‌ನಲ್ಲಿ ಆಗುತ್ತದೋ ಡಿಸೆಂಬರ್‌ನಲ್ಲಿ ಆಗುತ್ತದೊ ಕಾದುನೋಡಬೇಕು ಎಂದು ಹೇಳಿದರು.

ಇನ್ನು ರಾಜ್ಯಕ್ಕೆ ಕೇಂದ್ರದಿಂದ ಅನುದಾನ ತಾರತಮ್ಯವಾಗುತ್ತಿದೆ ಎಂದು ಕಾಂಗ್ರೆಸ್‌‍ ನಾಯಕ ಆರೋಪದ ಬಗ್ಗೆ ಮಾತನಾಡಿ, ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14 ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೊಟಿ ಹೆಚ್ಚಿಗೆ ಕೊಟ್ಟಿದೆ. ಯುಪಿಎ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7 ಸಾವಿರ ಕೋಟಿ ರೂ. ಬಂದಿತ್ತು. ಈಗ ಪ್ರತಿ ವರ್ಷ ಏಳು ಸಾವಿರ ಕೊಟಿ ಬರುತ್ತಿದೆ. 6 ಸಾವಿರ ಕಿ.ಮೀ. ಹೈವೆ ಆಗುತ್ತಿದೆ. ರಾಜ್ಯದಲ್ಲಿ ಕೇಂದ್ರದ ಅನುದಾನದಿಂದಲೇ ಯೋಜನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳಿದರು.

ಹೆಚ್ಚಿನ ಸುದ್ದಿ

Change Language »
error: Content is protected !!