Monday, November 4, 2024
Homeರಾಜ್ಯರೇಸ್ ಕೋರ್ಸ್‌ ರಸ್ತೆಗೆ ರೆಬೆಲ್ ಸ್ಟಾರ್ ಹೆಸರು: ಅಭಿಮಾನಿಗಳಲ್ಲಿ ಸಂತಸ

ರೇಸ್ ಕೋರ್ಸ್‌ ರಸ್ತೆಗೆ ರೆಬೆಲ್ ಸ್ಟಾರ್ ಹೆಸರು: ಅಭಿಮಾನಿಗಳಲ್ಲಿ ಸಂತಸ

ರೆಬೆಲ್ ಸ್ಟಾರ್ ಅಂಬರೀಷ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌. ಬೆಂಗಳೂರಿನ ರೇಸ್ ಕೋರ್ಸ್‌ ರಸ್ತೆಗೆ ಅಂಬರೀಷ್ ಹೆಸರಿಡಲು ಬಿಬಿಎಂಪಿ ನಿರ್ಧರಿಸಿದೆ.  ಈ ಹಿಂದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ಕಾರ್ಯಕ್ರಮವೊಂದರಲ್ಲಿ ಬಹಿರಂಗವಾಗಿ ಘೋಷಣೆ ಮಾಡಿದ್ರು. ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್ ನಾಮಕರಣ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.

ಈ ವಿಚಾರವನ್ನು ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾಮಾ ಹರೀಶ್​ ಅವರು ಟ್ವೀಟ್​ ಮಾಡಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸ್ಪಂದಿಸಿ, ರೇಸ್ ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರಿಡಲು ಒಪ್ಪಿಗೆ ಸೂಚಿಸಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ರಸ್ತೆಗೆ ಹೆಸರಿಡುವ ಕಾರ್ಯಕ್ರಮ ಈ ವಾರದಲ್ಲೇ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!