Sunday, July 7, 2024
Homeಟಾಪ್ ನ್ಯೂಸ್DENGUE CASE : ಬಿಬಿಎಂಪಿ ಆಯುಕ್ತರಿಗೆ ಡೆಂಗ್ಯೂ ದೃಢ..! 

DENGUE CASE : ಬಿಬಿಎಂಪಿ ಆಯುಕ್ತರಿಗೆ ಡೆಂಗ್ಯೂ ದೃಢ..! 

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಕಾಯಿಲೆಯನ್ನು ನಿರ್ಮೂಲನೆ ಮಾಡಬೇಕಿದ್ದ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. 

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಿರಿನಾಥ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗಿದ್ದು, ಈವರೆಗೆ ರಾಜ್ಯದಲ್ಲಿ 5,187 ಪ್ರಕರಣಗಳು ದಾಖಲಾಗಿದೆ.  

ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಸೇರಿದಂತೆ 3,975 ಪ್ರಕರಣಗಳು ಪತ್ತೆಯಾಗಿದ್ದು, ಹೆಚ್ಚಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. 

ಹೆಚ್ಚಿನ ಸುದ್ದಿ