Saturday, May 16, 2026
Homeಕ್ರೈಂBELLARY CASE: ಬಳ್ಳಾರಿ ಶೂಟಿಂಗ್‌ ಕೇಸ್-‌ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು

BELLARY CASE: ಬಳ್ಳಾರಿ ಶೂಟಿಂಗ್‌ ಕೇಸ್-‌ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು

ಬಳ್ಳಾರಿ: ಬಳ್ಳಾರಿಯಲ್ಲಿ (Bellary) ಬ್ಯಾನರ್ ಗಲಾಟೆ ವೇಳೆ ಗುಂಡು ಹಾರಿಸಿ (Firing) ಓರ್ವ ಕಾಂಗ್ರೆಸ್ ಕಾರ್ಯಕರ್ತ (Congress Worker) ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣ ಸಂಬಂಧ 40 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆ ವೇಳೆ ಪೊಲೀಸರು ಗಲಾಟೆ ನಡೆದ ವಿಡಿಯೋ ಆಧರಿಸಿ 40 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಳ್ಳಲಾದವರ ಪೈಕಿ ಎರಡೂ ಗುಂಪಿನ ಸದಸ್ಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಬಳ್ಳಾರಿಯಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳು ಇದೀಗ ನಾಪತ್ತೆಯಾಗಿದ್ದಾರೆ. ‌

ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜನಾರ್ಧನ ರೆಡ್ಡಿ, ಸತೀಶ ರೆಡ್ಡಿಗೆ ಸಂಬಂಧಿಸಿದಂತೆ ಎಲ್ಲಾ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಸತೀಶ್ ರೆಡ್ಡಿಯ ನಾಲ್ವರು ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಕೇಸು ದಾಖಲು:
ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮದ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದ, ಇದಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ (Bharat Reddy) ಸೇರಿ ಹಲವರ ವಿರುದ್ಧ ಎಫ್​​​ಐಆರ್ ​​(FIR) ದಾಖಲು ಮಾಡಲಾಗಿದೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್​​​ಐಆರ್​​ ದಾಖಲು ಮಾಡಲಾಗಿದೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟು ವೇಳೆ ಜನಾರ್ಧನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದರು.

ನೆನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ನೀಡಿದರು. ಮತ್ತೊಂದಡೆ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ನೀಡಿದರು. ಎಎಸ್​​​ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು, ಎಫ್​​​ಐಆರ್​​ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಬಳ್ಳಾರಿಯಲ್ಲಿ ಗುಂಡೇಟಿಗೆ ಕಾರ್ಯಕರ್ತ ಬ*ಲಿ, ಹಿರಿಯ ನಾಯಕರ ನಿಯೋಗ ರಚಿಸಿದ ಡಿಸಿಎಂ

ಹೆಚ್ಚಿನ ಸುದ್ದಿ

Change Language »
error: Content is protected !!