Monday, January 20, 2025
Homeಟಾಪ್ ನ್ಯೂಸ್ಬೆಂಗಳೂರಿನಲ್ಲಿ ಭೀಕರ ಅಪಘಾತ: ಯುವತಿ ಜೀವಕ್ಕೆ ಕುತ್ತಾದ ಹಾಫ್‌ ಹೆಲ್ಮೆಟ್‌?

ಬೆಂಗಳೂರಿನಲ್ಲಿ ಭೀಕರ ಅಪಘಾತ: ಯುವತಿ ಜೀವಕ್ಕೆ ಕುತ್ತಾದ ಹಾಫ್‌ ಹೆಲ್ಮೆಟ್‌?

ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಏಪ್ರಿಲ್ 2ರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಜೊತೆಗಿದ್ದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏಕಾಏಕಿ ಟೈರ್ ಸ್ಫೋಟಗೊಂಡು ಸ್ಕೂಟರ್‌ ಪಲ್ಟಿಯಾಗಿದ್ದು,  ಸ್ಕೂಟರ್‌ ನಲ್ಲಿದ್ದ ಆನಂದ್‌ ಹಾಗೂ ಸುಲೋಚನಾ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿ ಆನಂದ್‌, ಸುಲೋಚನಾ ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಸುಲೋಚನಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ಸುಲೋಚನ ಹಾಲ್ಫ್ ಹೆಲ್ಮೆಡ್ ಧರಿಸಿದ್ದರು. ಅವರ ತಲೆಗೆ ಗಂಭೀರ ಗಾಯವಾಗಿತ್ತು.  ಫುಲ್ ಹೆಲ್ಮೆಟ್ ಧರಿಸಿದ್ದ ಆನಂದ್ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸುಲೋಚನ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದು ವೇಳೆ ಫುಲ್‌ ಹೆಲ್ಮೆಟ್‌ ಧರಿಸಿದ್ದರೆ ಸುಲೋಚನಾ ಪ್ರಾಣ ಉಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದ ಸುಲೋಚನ, ಆನಂದ್ ನಿನ್ನೆ ಕೆಲಸ ಮುಗಿಸಿ ಕೋರಮಂಗಲದಿಂದ ಸ್ಕೂಟರ್ ನಲ್ಲಿ ತೆರಳಿದ್ರು. ಈ ವೇಳೆ ಅಪಘಾತ ಸಂಭವಿಸಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಹೆಚ್ಚಿನ ಸುದ್ದಿ

error: Content is protected !!