ಬೆಂಗಳೂರು: ಮಹಿಳೆಯೊಬ್ಬರಿಗೆ ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ಡಿಜಿಟಲ್ ಅರೆಸ್ಟ್ಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ (bengaluru) ನಡೆದಿದೆ.
ಹೌದು.. ಇತ್ತೀಚೆಗೆ ಬೆಂಗಳೂರಿನ ಮಹಿಳೆಯೊಬ್ಬರಿಗೆ ಅಪರಿಚಿತರಿಂದ ಕರೆ ಬಂದಿದ್ದು, ಅವರ ತಾಯಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿ ಬೆದರಿಕೆ ಹಾಕಲಾಗಿದೆ. ಮೊದಲಿಗೆ ಆಡಿಯೋ ಕಾಲ್ ಮಾಡಿದ್ದ ಖದೀಮರು ನಂತರ ಅದನ್ನು ವಿಡಿಯೋ ಕಾಲ್‌ಗೆ ಪರಿವರ್ತಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಇದಲ್ಲದೆ, ವಂಚಕರು ಬಿ ದಯಾನಂದ ಅವರ ಹೆಸರಿನಲ್ಲಿ ನಕಲಿ ಸೀಲ್ ಮತ್ತು ಸಹಿಯನ್ನು ಬಳಸಿದ ದಾಖಲೆಗಳನ್ನು ಕಳುಹಿಸಿದ್ದಾರೆ. ಜೊತೆಗೆ ಸಿಐಡಿ ಹೆಸರಿನಲ್ಲಿ ನಕಲಿ ಅರೆಸ್ಟ್ ವಾರಂಟ್ ಸೃಷ್ಟಿಸಿ ಕಳುಹಿಸಿದ್ದಾರೆ. ಇನ್ನೂ ಮುಂದೆ ಹೋಗಿ ಸುಪ್ರೀಂ ಕೋರ್ಟ್ ಆದೇಶವೆಂದು ಹೇಳಿ ಕೃತಕ ದಾಖಲೆಗಳನ್ನು ಕಳುಹಿಸಿ ಮಹಿಳೆಯನ್ನು ಭಯಪಡಿಸಲು ಪ್ರಯತ್ನಿಸಿದ್ದಾರೆ.
ಆದರೆ ದಾಖಲೆಗಳನ್ನು ಗಮನಿಸಿದ ಮಹಿಳೆಗೆ ಅನುಮಾನ ಮೂಡಿದ್ದು, ತಕ್ಷಣ ಎಚ್ಚೆತ್ತುಕೊಂಡು ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಅವರು ಅಧಿಕೃತ ಇಮೇಲ್ ಮೂಲಕ ಹಾಗೂ ರಾಷ್ಟ್ರೀಯ ಸೈಬರ್ ಕ್ರೈಂ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ರಾಜಾ ಇಮಾಮ್ ಖಾಸಿಂ, , ಪೊಲೀಸರು ಯಾವತ್ತೂ ಡಿಜಿಟಲ್ ಅರೆಸ್ಟ್ ಮಾಡುವುದಿಲ್ಲ. ವಿಡಿಯೋ ಕಾಲ್ ಮೂಲಕ ತನಿಖೆ ನಡೆಸಿ ಹಣ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ನಕಲಿ ಕರೆಗಳು ಅಥವಾ ದಾಖಲೆಗಳು ಬಂದರೆ ಸಾರ್ವಜನಿಕರು ಮರುಳಾಗಬಾರದು. ಅನುಮಾನ ಬಂದರೆ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯುಎಇಯಿಂದ ಕಾರವಾರ ಬಂದರಿಗೆ ಆಗಮಿಸಿದ ಹಡಗು- ಚೆಂಗ್ ಎಕ್ಸ್ ಹೊತ್ತು ತಂದಿದ್ದೇನು..?
ಭೀಕರ ಅಪಘಾತ : ಮೂವರು ಸಾ*ವು
ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ (road mishap) ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ನ (shiradi ghat) ಗುಂಡ್ಯ ಸಮೀಪ ನಡೆದಿದೆ.
ಮೃತರನ್ನು ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಹಿತಿಯ ಪ್ರಕಾರ, ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಉಜಿರೆ ಕಡೆಗೆ ಮರಳುತ್ತಿದ್ದರು. ಇದೇ ವೇಳೆ ಮಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಎದುರಿಗೆ ಬಂದಿದ್ದು, ಎರಡೂ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರಾದ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ದುರ್ಘಟನೆಯಿಂದ ಕೆಲಕಾಲ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರವನ್ನು ಪುನಃ ಆರಂಭಿಸುವಂತೆ ಕ್ರಮ ಕೈಗೊಂಡರು.