ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಉತ್ಸುಕರಾಗಿದ್ದ ಭವಾನಿ ರೇವಣ್ಣಗೆ ಟಿಕೆಟ್ ಕೈತಪ್ಪೋದು ಬಹುತೇಕ ಖಚಿವಾಗಿದೆ. ಇಂದು ಬೆಂಗಳೂರಿನ ಯಲಹಂಕದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಕಾರ್ಯಕರ್ತನೋರ್ವ, ಪಕ್ಷದ ಪರವಾಗಿ ಕೆಲಸ ಮಾಡಿದವರಿಗೆ ಟಿಕೆಟ್ ನೀಡಬೇಕು. ಹಾಸನದಲ್ಲಿ ಸ್ವರೂಪ್‌ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕುಮಾಸ್ವಾಮಿ, ಕಾರ್ಯಕರ್ತರ ಅಭಿಪ್ರಾಯವೇ ನಮ್ಮ ಅಭಿಪ್ರಾಯ. ಕಾರ್ಯಕರ್ತರಿಗೆ ಟಿಕೆಟ್ ಅಂತಾ ಹೇಳಿದ್ದೀನಿ. ಅದರಲ್ಲಿ ಬದಲಾವಣೆ ಇಲ್ಲ ಅಂತ ಪರೋಕ್ಷವಾಗಿ ಸ್ವರೂಪ್‌ಗೇ ಟಿಕೆಟ್ ನೀಡುವ ಸುಳಿವು ನೀಡಿದ್ದಾರೆ
ಈ ಮಧ್ಯೆ, ಹಾಸನದಲ್ಲಿ ಭವಾನಿಗೆ ಟಿಕೆಟ್ ತಪ್ಪಿದರೆ, ಹೊಳೇನರಸೀಪುರದಲ್ಲಿ ತಾವೂ ಚುನಾವಣೆಗೆ ಸ್ಪರ್ಧಿಸೋದಿಲ್ಲ ಎಂದು ಹೇಳಿದ್ದ ರೇವಣ್ಣಗೂ ಕುಮಾರಸ್ವಾಮಿ ಖಡಕ್ ಉತ್ತರ ನೀಡಿದ್ದು, ನನ್ನ ಹತ್ತಿರ ಬ್ಲ್ಯಾಕ್ ಮೇಲ್ ನಡೆಯಲ್ಲ ಅಂತಲೂ ಪರೋಕ್ಷವಾಗಿ ರೇವಣ್ಣ ದಂಪತಿಗೆ ಎಚ್ಚರಿಕೆ ಕೊಟ್ಟಿದ್ದಾರೆ.