Sunday, July 7, 2024
Homeಟಾಪ್ ನ್ಯೂಸ್JOE BIDEN : ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೈನ್ ಹಿಂದೇಟು?

JOE BIDEN : ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೈನ್ ಹಿಂದೇಟು?

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಜೋ ಬಿಡೈನ್ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಜೂನ್ 27ರಂದು ನಡೆದ ಅಧ್ಯಕ್ಷೀಯ ಚುನಾವಣೆಯ ಚರ್ಚೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಜೋ ಬಿಡೈನ್ ಸ್ಪರ್ಧೆಯಿಂದ ಹಿಂದೆ ಸರಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸ್ಪರ್ಧೆಯಿಂದ ಹಿಂದೆ ಸರಿಯುವ ಬಗ್ಗೆ ಸ್ಪಷ್ಟನೆ ನೀಡಿರುವ ಜೋ ಬಿಡೈನ್ ವಕ್ತಾರರು, ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದೊಂದು ವದಂತಿಯಾಗಿದ್ದು, ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಡೆಮಾಕ್ರೆಟಿಕ್ ಪಕ್ಷದ ಮುಖಂಡರೂ ಆಗಿರುವ ಜೋ ಬಿಡೈನ್, ನಾನು ಸ್ಪರ್ಧಿಸುತ್ತಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿದಿಲ್ಲ. ಸರಿಯುವುದೂ ಇಲ್ಲ ಎಂದು ಅವರು ಮಾಧ್ಯಮಗಳ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸುದ್ದಿ