Wednesday, February 19, 2025
Homeಟಾಪ್ ನ್ಯೂಸ್BIG BREAKING : ಮುಡಾ ಹಗರಣ : 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಇಡಿ

BIG BREAKING : ಮುಡಾ ಹಗರಣ : 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಇಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ ಸಂಬಂಧ ಬೆಂಗಳೂರಿನ ಇ.ಡಿ (ಜಾರಿ ನಿರ್ದೇಶನಾಲಯ) ತಾತ್ಕಾಲಿಕವಾಗಿ ಅಂದಾಜು ರೂ. 300 ಕೋಟಿ ಮೌಲ್ಯದ 142 ಸ್ಥಿರಾಸ್ತಿಗಳನ್ನು ಇದೇ ಮೊದಲ ಬಾರಿಗೆ ಮುಟ್ಟುಗೋಲು ಹಾಕಿದೆ.

ಈ ಕುರಿತು ಎಕ್ಸ್​​​ನಲ್ಲಿ ಅಧಿಕೃತ ಮಾಹಿತಿ ನೀಡಿರುವ ಇ.ಡಿ. ಪಿಎಂಎಲ್‌ಎ, 2002ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ ರೂ.300 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದನ್ನು ಖಚಿತ ಪಡಿಸಿದೆ.

ಇದಲ್ಲದೇ, ನಿರ್ಮಾಣ ಹಂತದ ಐಷಾರಾಮಿ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ, ಕ್ರಿಶ್ ರಿಯಲ್‌ಟೆಕ್ ಪ್ರೈವೇಟ್ ಲಿಮಿಟೆಡ್, ಅಮಿತ್ ಕತ್ಯಾಲ್ ಮತ್ತು ಇತರರ ವಿರುದ್ಧ 2002ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕ್ರಿಶ್ ರಿಯಲ್‌ಟೆಕ್ ಪ್ರೈವೇಟ್ ಲಿಮಿಟೆಡ್, ಅಮಿತ್ ಕತ್ಯಾಲ್ ಮತ್ತು ಇತರರ ವಿರುದ್ಧ ಜ.15ರಂದು ಇಡಿ ಪ್ರಕರಣ ದಾಖಲಿಸಿದೆ.

ಹೆಚ್ಚಿನ ಸುದ್ದಿ

error: Content is protected !!