Thursday, March 12, 2026
Homeಟಾಪ್ ನ್ಯೂಸ್BIG NEWS: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ- 25 ದಿನಗಳಷ್ಟು ಕಚ್ಚಾ ತೈಲ ಇದೆ: ಕೇಂದ್ರ ಸರ್ಕಾರ

BIG NEWS: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ- 25 ದಿನಗಳಷ್ಟು ಕಚ್ಚಾ ತೈಲ ಇದೆ: ಕೇಂದ್ರ ಸರ್ಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಸುಮಾರು 25 ದಿನಗಳಷ್ಟು ಕಚ್ಚಾ ತೈಲ (fuel prices) ಮತ್ತು ಸಂಸ್ಕರಿಸಿದ ತೈಲದ ದಾಸ್ತಾನು ಲಭ್ಯವಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಚ್ಚಾ ತೈಲ, ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಮತ್ತು ದ್ರವೀಕೃತ ನೈಸರ್ಗಿಕ ಅನಿಲ (LNG) ಆಮದುಗಾಗಿ ಪರ್ಯಾಯ ಮಾರ್ಗಗಳನ್ನು ಪರಿಶೀಲಿಸಲಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ದೇಶದಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ಬೆಲೆ ಹೆಚ್ಚಿಸುವ ಯಾವುದೇ ಯೋಜನೆ ಇಲ್ಲ ಎಂದು ಮೂಲಗಳು ತಿಳಿಸಿದ್ದಾರೆ.

ಉದ್ವಿಗ್ನ ಪರಿಸ್ಥಿತಿ ನಡುವೆಯೇ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ (Hardeep Singh Puri) ಅವರು ಸಚಿವಾಲಯ ಹಾಗೂ ಸಾರ್ವಜನಿಕ ವಲಯದ ಉದ್ಯಮಗಳ (PSU) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಚ್ಚಾ ತೈಲ, LPG ಸೇರಿದಂತೆ ಇತರ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ಕುರಿತು ಸಮಗ್ರ ಚರ್ಚೆ ನಡೆಸಿದ್ದಾರೆ.

ಪೆಟ್ರೋಲಿಯಂ ಸಚಿವಾಲಯವು ತನ್ನ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿದೆ. ಬದಲಾಗುತ್ತಿರುವ ಜಾಗತಿಕ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ದೇಶದಲ್ಲಿ ಪ್ರಮುಖ ಪೆಟ್ರೋಲಿಯಂ ಉತ್ಪನ್ನಗಳ ಲಭ್ಯತೆ ಮತ್ತು ಕೈಗೆಟುಕುವಿಕೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಭಾರತವು ಪಶ್ಚಿಮ ಏಷ್ಯಾದ ರಾಷ್ಟ್ರಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲವನ್ನು ಆಮದು ಮಾಡಿಕೊಳ್ಳುತ್ತದೆ. 2022ರ ಏಪ್ರಿಲ್‌ನಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತ ಕಂಡರೂ, ಭಾರತದಲ್ಲಿ ಇಂಧನದ ಚಿಲ್ಲರೆ ಬೆಲೆಯಲ್ಲಿ ತಕ್ಷಣದ ಬದಲಾವಣೆ ಆಗಿಲ್ಲ.

ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸಾಲರಾಮಯ್ಯ.. ವ್ಯಂಗ್ಯವಾಡಿದ್ದೇಕೆ ಜೆಡಿಎಸ್? ಯಾವ ಸಿಎಂ ಎಷ್ಟು ಸಾಲ ಮಾಡಿದ್ರು?

ಹೆಚ್ಚಿನ ಸುದ್ದಿ

Change Language »
error: Content is protected !!