ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ, ಆಪರೇಷನ್ ಕಮಲ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ಅವರು ಸ್ಫೋಟಕ ಹೇಳಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸೂಕ್ತ ಸಂದರ್ಭದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸುಮಾರು 25 ಶಾಸಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದರು.
ಕಾಂಗ್ರೆಸ್‌ನಿಂದ 60 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂಬ ಯತ್ನಾಳ್ ಅವರ ಹೇಳಿಕೆ ಬಾಲಿಶವಾಗಿದೆ. ಬಿಜೆಪಿಯ ಯಾವೆಲ್ಲಾ ಶಾಸಕರು ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ! 6 ಶಾಸಕರು ಕೂಡ ಅವರ ಪಕ್ಷಕ್ಕೆ ಹೋಗುವುದಿಲ್ಲ. ನಾವೇನು ಆಪರೇಷನ್ ಹಸ್ತ ಮಾಡುತ್ತಿಲ್ಲ. ಸೂಕ್ತ ಸಂದರ್ಭದಲ್ಲಿ ಬಿಜೆಪಿ – ಜೆಡಿಎಸ್‌ನಿಂದ… pic.twitter.com/Sl8a7kd6NK
— M B Patil (@MBPatil) January 19, 2025
ಇನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್‌ನಿಂದ 60 ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂದಿದ್ದರು. ಈ ಕುರಿತು ಟಾಂಗ್ ನೀಡಿರುವ ಎಂ.ಬಿ.ಪಾಟೀಲ್, ಯತ್ನಾಳ್ ಅತ್ಯಂತ ಬಾಲಿಶ ಹೇಳಿಕೆ ನೀಡಿದ್ದಾರೆ. ಯಾರೂ ನಮ್ಮ ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಬಿಜೆಪಿಯ ಯಾವೆಲ್ಲಾ ಶಾಸಕರು ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಯತ್ನಾಳ್ ಹೇಳಿದಂತೆ 60 ಅಲ್ಲ, ಕೇವಲ ಆರು ಶಾಸಕರು ಕೂಡ ಅವರ ಪಕ್ಷಕ್ಕೆ ಹೋಗುವುದಿಲ್ಲ. ನಾವೇನು ಆಪರೇಷನ್ ಹಸ್ತ ಮಾಡುತ್ತಿಲ್ಲ. ಬಿಜೆಪಿ-ಜೆಡಿಎಸ್‌ನಿಂದಲೇ ಅನೇಕ ಶಾಸಕರು ನಮ್ಮ ಪಕ್ಷಕ್ಕೆ ಬರಲಿದ್ದಾರೆ ಕಾದುನೋಡಿ ಎಂದು ತಿಳಿಸಿದರು.