Wednesday, December 4, 2024
Homeಟಾಪ್ ನ್ಯೂಸ್BIG SHOCK : ಮಧ್ಯಾಹ್ನ ಊಟ ಸೇವಿಸಿದ್ದ ವಿದ್ಯಾರ್ಥಿ ವಸತಿ ಶಾಲೆಯಲ್ಲೇ ಸಾವು!

BIG SHOCK : ಮಧ್ಯಾಹ್ನ ಊಟ ಸೇವಿಸಿದ್ದ ವಿದ್ಯಾರ್ಥಿ ವಸತಿ ಶಾಲೆಯಲ್ಲೇ ಸಾವು!

ತುಮಕೂರು : ವಿದ್ಯಾರ್ಥಿಯೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿ ಅಭಿಲಾಷ್ (13) ಎಂದು ಗುರುತಿಸಲಾಗಿದೆ. ಶಕುನಿತಿಮ್ಮನಹಳ್ಳಿ ಗ್ರಾಮದ ರಮೇಶ ಅವರ ಪುತ್ರ ಅಭಿಲಾಷ್ 6ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಮಧ್ಯಾಹ್ನ ಊಟ ಮಾಡಿದ ಬಳಿಕ ಅಸ್ವಸ್ಥಗೊಂಡಿದ್ದ. ಸೂಕ್ತ ಚಿಕಿತ್ಸೆ ಸಿಗದೇ ವಸತಿ ಶಾಲೆಯ ಕೊಠಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಅಭಿಲಾಷ್​ ಅಸ್ವಸ್ಥಗೊಂಡಾಗ ಅವನಿ​​​​ಗೆ ಪ್ರಾಥಮಿಕ ಚಿಕಿತ್ಸೆ ನೀಡದೇ ವಸತಿ ಶಾಲೆಯ ಪ್ರಾಂಶುಪಾಲ ವಿನೋದ್ ಯಾದವ್ ಹಾಗೂ ವಾರ್ಡನ್ ಮಂಜುನಾಥ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತ ವಿದ್ಯಾರ್ಥಿ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳಕ್ಕೆ ಕೊರಟಗೆರೆ ತಹಶೀಲ್ದಾರ್ ಭೇಟಿ ಪರಿಶೀಲನೆ ನಡೆಸಿದ್ದು, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ವಿದ್ಯಾರ್ಥಿಯ ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿ

error: Content is protected !!