ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಇದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯರನ್ನು ಗೆಲ್ಲಿಸಲು ಬಿಜೆಪಿ ಹಿಂಬಾಗಿಲ ಮೂಲಕ ಅನುಕೂಲ ಮಾಡಿಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.
ವರುಣಾದಲ್ಲಿ ಬಿಜೆಪಿಯವರು ಸಮರ್ಥ ಅಭ್ಯರ್ಥಿ ಹಾಕುವುದಿಲ್ಲ. ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ನಡೆದಿರುವುದಲ್ಲ, ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸುವ ಕಾಂಗ್ರೆಸ್ ಪಕ್ಷವೇ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ, ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ಮಾಡಿಕೊಂಡು ಬರುತ್ತಿದ್ದು, ಆ ನಿಟ್ಟಿನಲ್ಲಿ ಪ್ರಚಾರ ನಡೆಸುತ್ತಿದ್ದೇವೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.