Sunday, July 7, 2024
Homeಟಾಪ್ ನ್ಯೂಸ್Bjp Vs Congress :  ಸಿದ್ದರಾಮಯ್ಯ ರಾಜ್ಯ ಕಂಡ ಅತ್ಯಂತ ದುರ್ಬಲ ಸಿಎಂ : ಬಿಜೆಪಿ...

Bjp Vs Congress :  ಸಿದ್ದರಾಮಯ್ಯ ರಾಜ್ಯ ಕಂಡ ಅತ್ಯಂತ ದುರ್ಬಲ ಸಿಎಂ : ಬಿಜೆಪಿ ಟೀಕೆ

ಬೆಂಗಳೂರು : ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್‌ ಮಾಡುವುದೇ ರಾಜ್ಯ ಕಾಂಗ್ರೆಸ್​​​​​ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್ ಎಂದು ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್ ಮಅಡಿ, ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದಿದೆ.


ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದೆ. ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುವುದಕ್ಕೆ ಸ್ಪಷ್ಟ ನಿದರ್ಶನ.

ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್‌ ಆಗಿದೆ ಎಂಬುವುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.

ಹೆಚ್ಚಿನ ಸುದ್ದಿ