ಬೆಂಗಳೂರು: ಸೋಲುವ ಭಯದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಬಹುಭಾಷಾ ನಟ ಹಾಗೂ ನಿರ್ದೇಶಕ ಪ್ರಕಾಶ್ ರಾಜ್ ಹೇಳಿದ್ದಾರೆ.
ನಟ ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಸೇರ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಪ್ರಕಾಶ್ ರಾಜ್ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡಿಸುತ್ತಿದೆ. ಇದು ಸುದ್ದಿ ಸುಳ್ಳು ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಮೊದಲಿಂದಲೂ ಬಿಜೆಪಿ ಹಾಗೂ ಪ್ರಕಶ್ ರಾಜ್ ಎಣ್ಣೆ ಸಿಗೇಕಾಯಿಯಂತೆ ಇದ್ದು, ಬಿಜೆಪಿ ನಾಯಕರೂ ಸಹ ಪ್ರಕಾಶ್ ವಿರುದ್ಧ ಕಿಡಿಕಾರಿದ್ದಾರೆ. ಆಗಾಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಕುಟುಕುವ ಪ್ರಕಾಶ್ ರಾಜ್ ಇದೀಗ ಭ್ರಷ್ಟ ಬಿಜೆಪಿ ಸುಳ್ಳು ಹರಡುತ್ತಿದೆ ಎಂದು ಹೇಳಿದ್ದಾರೆ.